ಬೆಂಗಳೂರು: ತಿರುಪತಿ ತಿಮ್ಮಪ್ಪನ ಲಡ್ಡು ಪ್ರಸಾದದಲ್ಲಿ ಪ್ರಾಣಿಯ ಕೊಬ್ಬಿನ ಅಂಶ ಪತ್ತೆಯ ಬೆನ್ನಲ್ಲೇ, ರಾಜ್ಯ ಸರ್ಕಾರ ಅಲರ್ಟ್ ಆಗಿದೆ. ರಾಜ್ಯದ ತುಪ್ಪ ಉದ್ಪಾದನೆಯ ಗುಣಮಟ್ಟ ಪರಿಶೀಲನೆಗೆ ಆರೋಗ್ಯ ಇಲಾಖೆ ನಿರ್ಧರಿಸಿದೆ ಎಂಬುದಾಗಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ತುಪ್ಪದ ಮಾದರಿಗಳನ್ನು ಸಂಗ್ರಹಿಸಿ ಪರಿಶೀಲನೆಗೆ ಒಳಪಡಿಸುವಂತೆ ಸೂಚಿಸಲಾಗಿದೆ. ನಂದಿನಿ ತುಪ್ಪ ಹೊರತಿಪಡಿಸಿ ಉಳಿದ ತುಪ್ಪಗಳ ಸ್ಯಾಂಪಲ್ ಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲು ನಿರ್ಧರಿಸಲಾಗಿದೆ ಎಂದರು.
ರಾಜ್ಯದಲ್ಲಿ ತುಪ್ಪದ ಗುಣಮಟ್ಟ ಕಾಪಾಡುವ ನಿಟ್ಟಿನಲ್ಲಿ ಈ ಕರಮ ವಹಿಸಲಾಗಿದೆ. ಪ್ರಸಾದ ಪರಿಶೀಲನೆಗಿಂತ ನೇರವಾಗಿ ತುಪ್ಪದ ಪರಿಶೀಲನೆಗೆ ಆರೋಗ್ಯ ಇಲಾಖೆ ಮುಂದಾಗಿರುವುದಾಗಿ ತಿಳಿಸಿದರು.
ಈಗಾಗಲೇ ಆರೋಗ್ಯ ಇಲಾಖೆಯಿಂದ ತುಪ್ಪದ ಸ್ಯಾಂಪಲ್ ಸಂಗ್ರಹವನ್ನು ಆರೋಗ್ಯ ಇಲಾಖೆಯ ಅಧಿಕಾರಿಗಳು ಸಂಗ್ರಹಿಸುವುದಕ್ಕೆ ಪ್ರಾರಂಭಿಸಿದ್ದಾರೆ. ಪ್ರಾಣಿಗಳ ಕೊಬ್ಬಿನ ಅಂಶ ಬೆರೆಕೆಯಾಗಿದ್ಯಾ ಎನ್ನುವ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದರು.
ಇರಾನ್ ಕಲ್ಲಿದ್ದಲು ಗಣಿಯಲ್ಲಿ ಭೀಕರ ಸ್ಫೋಟ: 30 ಕಾರ್ಮಿಕರು ಸಾವು, ಹಲವರಿಗೆ ಗಾಯ | Iran coal mine blast