ಬೆಂಗಳೂರು: ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ನಡೆಸಲು 2 ಕೊಠಡಿಗಳ ಅಗತ್ಯವಿದೆ. ರಾಜ್ಯದಲ್ಲಿ ಇಂತಹ ಕೊಠಡಿಗಳುಳ್ಳ 10 ಸಾವಿರ ಅಂಗನವಾಡಿ ಕೇಂದ್ರಗಳನ್ನು ಗುರುತಿಸಲಾಗಿದೆ. ಸದ್ಯ 4 – 5 ಸಾವಿರ ಅಂಗನವಾಡಿಗಳಲ್ಲಿ ತರಗತಿಗಳನ್ನು ಆರಂಭಿಸಲಾಗುವುದು. ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಎಲ್ಲ ಕೇಂದ್ರಗಳಿಗೆ ವಿಸ್ತರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ನಡೆಸಲು 2 ಕೊಠಡಿಗಳ ಅಗತ್ಯವಿದೆ. ರಾಜ್ಯದಲ್ಲಿ ಇಂತಹ ಕೊಠಡಿಗಳುಳ್ಳ 10 ಸಾವಿರ ಅಂಗನವಾಡಿ ಕೇಂದ್ರಗಳನ್ನು ಗುರುತಿಸಲಾಗಿದೆ. ಸದ್ಯ 4 – 5 ಸಾವಿರ ಅಂಗನವಾಡಿಗಳಲ್ಲಿ ತರಗತಿಗಳನ್ನು ಆರಂಭಿಸಲಾಗುವುದು. ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಎಲ್ಲ ಕೇಂದ್ರಗಳಿಗೆ ವಿಸ್ತರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ… pic.twitter.com/w2N0FLg1AZ
— DIPR Karnataka (@KarnatakaVarthe) July 17, 2025
ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಆರಂಭಿಸುತ್ತಿರುವ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರೊಂದಿಗೆ ಗುರುವಾರ ಪೂರ್ವಭಾವಿ ಸಭೆ ನಡೆಸಿದರು.
ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಯಿತು. ಅಂಗನವಾಡಿಯಲ್ಲಿ ಆರಂಭಿಸಲಾಗುವ ಪೂರ್ವ ಪ್ರಾಥಮಿಕ ತರಗತಿಗಳಲ್ಲಿ ಚಿಲಿಪಿಲಿ 2.0 ಪಠ್ಯಕ್ರಮ ಆಳವಡಿಕೆ, ಶಿಕ್ಷಣ ಇಲಾಖೆಯ ಪೂರ್ವ ಪ್ರಾಥಮಿಕ ತರಗತಿಗಳಿಗೆ ಈಗಾಗಲೇ ದಾಖಲಾಗಿರುವ ಮಕ್ಕಳಿಗೆ ಪೂರಕ ಪೌಷ್ಠಿಕ ಆಹಾರ, ತೂಕ ಮತ್ತು ಅಳತೆ ಬಗ್ಗೆಯೂ ಗಮನಹರಿಸಬೇಕು ಎಂದು ಉಭಯ ಸಚಿವರು ಚರ್ಚೆ ನಡೆಸಿದರು.
ಸಭೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ರಶ್ಮಿ ಮಹೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿ ಡಾ.ಶಾಮ್ಲಾ ಇಕ್ಬಾಲ್, ಇಬ್ಬರು ಸಚಿವರ ಆಪ್ತ ಕಾರ್ಯದರ್ಶಿಗಳಾದ ಡಾ.ಟಿ.ಎಚ್.ವಿಶ್ವನಾಥ್, ಕಿಶೋರ್ ಕುಮಾರ್, ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್ ಸೇರಿದಂತೆ ಎರಡು ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
Watch Video: ದೇಶದ ರಕ್ಷಣಾ ವ್ಯವಸ್ಥೆಗೆ ಮತ್ತಷ್ಟು ಬಲ: ನವೀಕರಿಸಿದ ‘ಆಕಾಶ್ ವೆಪನ್ ಸಿಸ್ಟಮ್’ ಪರೀಕ್ಷೆ ಯಶಸ್ವಿ
LIFE STYLE: ನೀವು ಗರ್ಭಿಣಿಯಾಗುತ್ತಿಲ್ಲವೇ? ಹಾಗಾದ್ರೇ ಇವು ಕೂಡ ಕಾರಣ ಇರಬಹುದು..!