ಬೆಂಗಳೂರು: ಈ ಹಿಂದೆ ಸಿಬಿಐಗೆ ರಾಜ್ಯದಲ್ಲಿನ ಅಪರಾಧಗಳ ತನಿಖೆಯನ್ನು ಮುಕ್ತವಾಗಿ ನಡೆಸಲು ಅವಕಾಶ ನೀಡಲಾಗಿತ್ತು. ಈಗ ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಹೊರ ಬರುತ್ತಿದ್ದಂತೆ ಈ ಹಿಂದಿನ ಸರ್ಕಾರದ ಅವಧಿಯಲ್ಲಿ ಸಿಬಿಐಗೆ ನೀಡಿದ್ದಂತ ಮುಕ್ತ ಅವಕಾಶವನ್ನು ಹಾಲಿ ಕಾಂಗ್ರೆಸ್ ಸರ್ಕಾರ ಹಿಂಪಡೆಯಲು ಮಹತ್ವದ ನಿರ್ಧಾರವನ್ನು ಇಂದಿನ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ.
ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಸಚಿವ ಹೆಚ್.ಕೆ ಪಾಟೀಲ್ ಅವರು, ಈ ಹಿಂದೆ ರಾಜ್ಯದಲ್ಲಿನ ಅಪರಾಧ ಪ್ರಕರಣಗಳನ್ನು ತನಿಖೆ ಮಾಡಲು ಸಿಬಿಐಗೆ ಮುಕ್ತ ಅವಕಾಶವನ್ನು ನೀಡಿ, ಅಧಿಸೂಚನೆಯನ್ನು ಹೊರಡಿಸಲಾಗಿತ್ತು. ಈ ಅಧಿಸೂಚನೆಯನ್ನು ಹಿಂಪಡೆಯಲು ಸರ್ಕಾರ ನಿರ್ಧಾರ ಕೈಗೊಂಡಿದೆ ಎಂದರು.
ದೆಹಲಿ ವಿಶೇಷ ಪೊಲೀಸ್ ಸ್ಥಾಪನೆ (ಡಿಎಸ್ಪಿಇ) ಕಾಯ್ದೆ, 1946 ರ ಸೆಕ್ಷನ್ 6 ರ ಪ್ರಕಾರ, ಸಿಬಿಐ ತನಿಖೆ ನಡೆಸಲು ಆಯಾ ರಾಜ್ಯ ಸರ್ಕಾರಗಳಿಂದ ಒಪ್ಪಿಗೆ ಪಡೆಯಬೇಕು ಎಂದರು.
ಭ್ರಷ್ಟಾಚಾರ ತಡೆ ಕಾಯ್ದೆಯ ಅಡಿಯಲ್ಲಿ ಮುಕ್ತವಾಗಿ ಸಿಬಿಐ ತನಿಖೆ ನಡೆಸಲು ಈ ಹಿಂದಿನ ಸರ್ಕಾರ ಅವಕಾಶ ಮಾಡಿಕೊಟ್ಟಿತ್ತು. ಆದರೇ ಈಗ ಈ ಅಧಿಸೂಚನೆಯನ್ನು ಹಿಂಪಡೆಯಲು ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದರು. ಈ ಮೂಲಕ ಮುಡಾ ಹಗರಣದಲ್ಲಿ ಸಿಬಿಐ ಎಂಟ್ರಿ ಕೊಡದಂತೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ.
BIG UPDATE: ಬಿಹಾರದಲ್ಲಿ ಪವಿತ್ರ ಗಂಗಾ ಸ್ನಾನದ ವೇಳೆ ಘೋರ ದುರಂತ: 37 ಮಕ್ಕಳು ಸೇರಿ 43 ಮಂದಿ ಜಲಸಮಾಧಿ