ಮಹಾರಾಷ್ಟ್ರ : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ (Maharashtra-Karnataka border dispute )ಕುರಿತಂತೆ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ (Uddhav Thackeray )ಹೊಸದೊಂದು ಹೇಳಿಕೆ ನೀಡಿದ್ದು, ಕರ್ನಾಟಕ ಆಕ್ರಮಿತ ಮಹಾರಾಷ್ಟ್ರ ಪ್ರದೇಶಗಳನ್ನು ಕೇಂದ್ರಾಡಳಿತ ಪ್ರದೇಶವೆಂದು(Union Territory) ಘೋಷಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಸೋಮವಾರ ರಾಜ್ಯ ವಿಧಾನ ಪರಿಷತ್ತಿನಲ್ಲಿ(Maharashtra Assembly) ಮಾತನಾಡಿದ ಅವರು, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆಯವರು ಮೌನವಾಗಿದ್ದು, ಗಡಿ ವಿವಾದದ ಬಗ್ಗೆ ರಾಜ್ಯ ಸರ್ಕಾರದ ನಿಲುವು ಏನೆಂದು ಪ್ರಶ್ನಿಸಿದರು.
ಇದು ಕೇವಲ ಭಾಷೆ ಮತ್ತು ಗಡಿಯ ಪ್ರಕರಣವಲ್ಲ, ಮಾನವೀಯತೆಯ ಪ್ರಕರಣವಾಗಿದೆ. ಮರಾಠಿ ಮಾತನಾಡುವ ಜನರು ತಲೆಮಾರುಗಳಿಂದ ಗಡಿ ಗ್ರಾಮಗಳಲ್ಲಿ ನೆಲೆಸಿದ್ದಾರೆ. ಸುಪ್ರೀಂ ಕೋರ್ಟ್ನಲ್ಲಿ(Supreme Court) ಸಮಸ್ಯೆ ಇತ್ಯರ್ಥವಾಗುವವರೆಗೆ, ಕರ್ನಾಟಕ ಆಕ್ರಮಿತ ಮಹಾರಾಷ್ಟ್ರವನ್ನು ಕೇಂದ್ರ ಸರ್ಕಾರವು (Central Govt) ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸಬೇಕು ಎಂದು ಆಗ್ರಹಿಸಿದರು.
ಗಡಿ ಸಮಸ್ಯೆಯು 1957 ರ ಹಿಂದಿನದು. ಅಂದಿನಿಂದ ಸುಮಾರು 56 ವರ್ಷಗಳಿಂದ ಈ ಹೋರಾಟ ನಡೆಯುತ್ತಿದೆ. ಪ್ರಾದೇಶಿಕ ಭಾಷೆಗಳನ್ನಾಧರಿಸಿ ರಾಜ್ಯಗಳು ರಚನೆಯಾದ ಕಾಲದಿಂದಲೂ ಗಡಿಯಲ್ಲಿ ಮರಾಠಿ ಭಾಷೆ ಬೇರೂರಿದೆ. ಹಲವು ವರ್ಷಗಳಿಂದ ಅಲ್ಲಿ ವಾಸಿಸುವ ನಾಗರಿಕರು ಮರಾಠಿ ಭಾಷೆಯನ್ನು ಮಾತನಾಡುತ್ತಾರೆ. ಈ ಹೋರಾಟ ರಾಜಕೀಯವಲ್ಲ ಎಂದು ಠಾಕ್ರೆ ಹೇಳಿದ್ದಾರೆ.
ಕೇಂದ್ರ ಸರ್ಕಾರ ಕಾವಲುಗಾರನಾಗಿ ಕಾರ್ಯ ನಿರ್ವಹಿಸಿದೆಯೇ, ಪಾಲಕನಾಗಿ ಕಾರ್ಯನಿರ್ವಹಿಸುತ್ತದೆ ಎಂದು ನಾವು ನಿರೀಕ್ಷಿಸುತ್ತೇವೆ ಎಂದು ಅವರು ಹೇಳಿದರು.
ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಈಗಾಗಲೇ ನಿರ್ಣಯವನ್ನು ಅಂಗೀಕರಿಸಿದ್ದು ನಿರ್ಣಯವು ಮಹಾರಾಷ್ಟ್ರವು ಸೃಷ್ಟಿಸಿದ ಗಡಿ ವಿವಾದವನ್ನು ಖಂಡಿಸಿದೆ.
Border row with K’taka: ಮಹಾರಾಷ್ಟ್ರ ಒಂದು ಇಂಚು ಭೂಮಿಗಾಗಿಯೂ ಹೋರಾಡಲಿದೆ : ಗಡಿ ವಿವಾದ ಕುರಿತು ಫಡ್ನವೀಸ್ ಹೇಳಿಕೆ
Covid-19 BF.7 Symptoms : ಎಚ್ಚರ.. ಈ 5 ಲಕ್ಷಣಗಳು ಕಾಣಿಸಿಕೊಂಡ್ರೆ ಜಾಗ್ರತೆ