ಶಿವಮೊಗ್ಗ : ಅಂಚೆ ಇಲಾಖೆಯು ( Post Office ) ಶಾಲಾ ಮಕ್ಕಳಲ್ಲಿ ( School Children ) ಅಂಚೆಚೀಟಿ ಸಂಗ್ರಹಣೆಯನ್ನು ಉತ್ತೇಜಿಸಲು ದೀನ್ ದಯಾಳ್ ಸ್ಪರ್ಶ್ ಯೋಜನೆಯಡಿ ವಿದ್ಯಾರ್ಥಿವೇತನ ( Scholarship ) ಪ್ರಶಸ್ತಿಗಾಗಿ 6ನೇ ತರಗತಿಯಿಂದ 9ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ.
ಶೈಕ್ಷಣಿಕ ಪಠ್ಯಕ್ರಮವನ್ನು ಬಲಪಡಿಸುವುದು ಮತ್ತು ಚಿಕ್ಕವಯಸ್ಸಿನ ಮಕ್ಕಳಲ್ಲಿ ಅಂಚೆ ಚೀಟಿ ಸಂಗ್ರಹವನ್ನು ಉತ್ತೇಜಿಸುವುದು ವಿದ್ಯಾರ್ಥಿವೇತನದ ಉದ್ದೇಶವಾಗಿದೆ. ಈ ಹವ್ಯಾಸ ಅವರಿಗೆ ವಿಶ್ರಾಂತಿ ಮತ್ತು ಖಿನ್ನತೆ ಹೋಗಲಾಡಿಸಲು ಸಹಾಯ ಮಾಡುತ್ತದೆ.
ಈ ಯೋಜನೆಯಡಿ 2021-22 ನೇ ಶೈಕ್ಷಣಿಕ ವರ್ಷದಲ್ಲಿ ಶೇ.60 ಅಂಕಗಳನ್ನು ಹೊಂದಿರುವ ಮತ್ತು ಅಂಚೆ ಚೀಟಿಗಳ ಸಂಗ್ರಹಣೆಯ ಖಾತೆಯನ್ನು/ಫಿಲಾಟೆಲಿಕ್ ಕ್ಲಬ್ನ ಸದಸ್ಯರನ್ನು ಹೊಂದಿರುವ ಮತ್ತು ಅಂಚೆ ಚೀಟಿಗಳ ಸಂಗ್ರಹಣೆಯನ್ನು ಹವ್ಯಾಸವಾಗಿ ಮುಂದುವರೆಸುವ 6 ರಿಂದ 9 ನೇ ತರಗತಿಯ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ.6000/- ವಿದ್ಯಾರ್ಥಿವೇತನ ನೀಡಲಾಗುತ್ತದೆ. ಅಂಚೆ ಚೀಟಿಗಳ ಸಂಗ್ರಹಣೆ ರಸಪ್ರಶ್ನೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳು ಅಂಚೆ ಇಲಾಖೆಯು ನೀಡುವ ಅಂಚೆ ಚೀಟಿ ಸಂಗ್ರಹ ಯೋಜನೆಯಲ್ಲಿ ಸ್ಪರ್ಧಿಸಬೇಕಾಗುತ್ತದೆ.
ಕರ್ನಾಟಕ ರಾಜ್ಯದಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಹಂತ-1 ಅಂಚೆ ಚೀಟಿಗಳ ರಸಪ್ರಶ್ನೆ(ಲಿಖಿತ) ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಜಿಯನ್ನು ಸಲ್ಲಿಸಲು/ಪೋಸ್ಟ್ ಮಾಡಲು ಸೆಪ್ಟೆಂಬರ್ 26 ಕಡೆಯ ದಿನವಾಗಿದೆ. ರಾಜ್ಯದ ಎಲ್ಲಾ ಶಾಲೆಗಳು ತಮ್ಮ ವಿದ್ಯಾರ್ಥಿಗಳನ್ನು ವಿದ್ಯಾರ್ಥಿವೇತನ ಯೋಜನೆಯಲ್ಲಿ ಭಾಗವಹಿಸಲು ಪ್ರೋತ್ಸಾಹಿಸಲು ವಿನಂತಿಸಲಾಗಿದೆ.
ದೇವಸ್ಥಾನಗಳ ಭೂಮಿ ಒತ್ತುವರಿದಾರರ ವಿರುದ್ದ ಕಠಿಣ ಕ್ರಮ – ಸಚಿವೆ ಶಶಿಕಲಾ ಜೊಲ್ಲೆ ಖಡಕ್ ಎಚ್ಚರಿಕೆ
ಹೆಚ್ಚಿನ ಮಾಹಿತಿಗೆ www.indiapost.gov.in ಮತ್ತು www.karnatakapost.gov.in ಭೇಟಿ ನೀಡಬಹುದೆಂದು ಶಿವಮೊಗ್ಗ ಅಂಚೆ ವಿಭಾಗದ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.