ಶಿವಮೊಗ್ಗ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಶಿವಮೊಗ್ಗ ಜಿಲ್ಲಾ ಘಟಕದ ಕಾರ್ಯದರ್ಶಿಯಾಗಿ ದೀಪಕ್ ಸಾಗರ್ ಅವರನ್ನು ನೇಮಕ ಮಾಡಲಾಗಿದೆ.
ಶಿವಮೊಗ್ಗ ಜಿಲ್ಲೆಯ ಸಾಗರದ ವಿಜಯವಾಣಿ ಪತ್ರಿಕೆಯ ಹಿರಿಯ ವರದಿಗಾರ, ಮಾಧ್ಯಮ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ದೀಪಕ್ ಸಾಗರ್ ಅವರನ್ನು ಶಿವಮೊಗ್ಗ ಜಿಲ್ಲಾ ಘಟಕದ ಕೆಯುಡಬ್ಲ್ಯೂಜೆ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ಈ ಬಗ್ಗೆ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪರ್ತಕರ್ತರ ಸಂಘದ ಜಿಲ್ಲಾಧ್ಯಕ್ಷರಾದಂತ ಹೆಚ್.ಯು ವೈದ್ಯನಾಥನ್, ಪ್ರಧಾನ ಕಾರ್ಯದರ್ಶಿ ಆರ್.ಎಸ್ ಹಾಲಸ್ವಾಮಿ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.
ಅಂದಹಾಗೇ ದೀಪಕ್ ಸಾಗರ್, ಡಿಡಿ ನ್ಯೂಸ್ ಶಿವಮೊಗ್ಗ ಜಿಲ್ಲಾ ಕರೆಸ್ಪಾಂಡೆಂಟ್ ಆಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ಇದಕ್ಕೂ ಮೊದಲು ಪ್ರಜಾವಾಣಿ, ವಿದ್ಯುನ್ಮಾನ ಮಾಧ್ಯಮಗಳಲ್ಲೂ ಕೆಲಸ ಮಾಡಿದ ಅನುಭವ ಅವರಿಗಿದೆ. ಪ್ರಸ್ತುತ ಸಾಗರ ತಾಲ್ಲೂಕು ವಿಜಯವಾಣಿ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವಂತ ದೀಪಕ್ ಸಾಗರ್ ಅವರನ್ನು ಶಿವಮೊಗ್ಗ ಜಿಲ್ಲಾ ಘಟಕದ ಕೆಯುಡಬ್ಲ್ಯೂಜೆ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಅವರಿಗೆ ಕೆಎನ್ಎನ್ ಸಂಸ್ಥೆಯೂ ಹೃತ್ಪೂರ್ವಕವಾಗಿ ಅಭಿನಂದನೆ, ಶುಭಾಶಯವನ್ನು ಕೋರುತ್ತಿದೆ.
ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು

ಬಿಹಾರದಲ್ಲಿ NDAಗೆ ಭರ್ಜರಿ ಗೆಲುವು: ಸಾಗರದಲ್ಲಿ ಬಿಜೆಪಿಯಿಂದ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮ
BREAKING : ರಾಣಿ ಚೆನ್ನಮ್ಮ ಮೃಗಾಲಯದಲ್ಲಿ 28 ಕೃಷ್ಣ ಮೃಗಗಳ ನಿಗೂಢ ಸಾವು : ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ








