ನವದೆಹಲಿ: ನವದೆಹಲಿ ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತದಲ್ಲಿ ಪ್ರಾಣ ಕಳೆದುಕೊಂಡವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾನುವಾರ ಸಂತಾಪ ಸೂಚಿಸಿದ್ದಾರೆ ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.
ಜನದಟ್ಟಣೆಯ ರೈಲ್ವೆ ನಿಲ್ದಾಣದಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಮತ್ತು ಒಂದು ಡಜನ್ ಗೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಕಾಲ್ತುಳಿತಕ್ಕೂ ಮುನ್ನ ನಿಲ್ದಾಣದ ಪ್ಲಾಟ್ಫಾರ್ಮ್ ಸಂಖ್ಯೆ 14 ಮತ್ತು 15 ರಲ್ಲಿ ಮಹಾ ಕುಂಭ ನಡೆಯುತ್ತಿರುವ ಪ್ರಯಾಗ್ರಾಜ್ಗೆ ರೈಲುಗಳನ್ನು ಹತ್ತಲು ಕಾಯುತ್ತಿದ್ದ ಪ್ರಯಾಣಿಕರ ಗುಂಪು ಹೆಚ್ಚಾಗಿತ್ತು.
“ನವದೆಹಲಿ ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತದಲ್ಲಿ ಜೀವಹಾನಿಯಾಗಿರುವ ಬಗ್ಗೆ ತಿಳಿದು ತೀವ್ರ ದುಃಖವಾಗಿದೆ. ದುಃಖಿತ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಸಂತಾಪವನ್ನು ವ್ಯಕ್ತಪಡಿಸುತ್ತೇನೆ ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಮುರ್ಮು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.