ತುಮಕೂರು : ಸಿದ್ಧಗಂಗಾ ಮಠದ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ 118ನೇ ಜಯಂತಿ ಹಾಗೂ ಗುರುವಂದನಾ ಮಹೋತ್ಸವ ಇಂದು ನೆರವೇರಲಿದೆ. ಗುರುವಿಗೆ ನುಡಿನಮನ ಸಲ್ಲಿಸಲು ಸಿದ್ಧಗಂಗಾ ಮಠ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವ ರಾಜನಾಥ್ ಮೆಸೇಜ್ ಅವರು ಭಾಗವಹಿಸಲಿದ್ದು ಇಂದು ಅವರು ಕರ್ನಾಟಕಕ್ಕೆ ಆಗಮಿಸಲಿದ್ದಾರೆ.
ಈ ಒಂದು ಕಾರ್ಯಕ್ರಮಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಆಹ್ವಾನ ನೀಡಲಾಗಿತ್ತು. ಅವರು ಬೇರೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿರುವುದರಿಂದ ಭಾಗವಹಿಸುತ್ತಿಲ್ಲ. ಅವರ ಬದಲಾಗಿ ರಾಜನಾಥ್ ಸಿಂಗ್ ಭಾಗವಹಿಸುತ್ತಿದ್ದಾರೆ.ಗುರುವಂದನೆ ಮತ್ತು ಜಯಂತಿ ಪ್ರಯುಕ್ತ ಇಂದು ಮುಂಜಾನೆಯಿಂದಲೇ ಮಠದಲ್ಲಿ ಧಾರ್ಮಿಕ ಚಟುವಟಿಕೆ ಆರಂಭವಾಗಲಿವೆ.ಗೋಸಲ ಸಿದ್ದೇಶ್ವರ ರಂಗಮಂದಿರದಲ್ಲಿ ಬೆಳಗ್ಗೆ 10:30 ಕ್ಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತದೆ.
ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ತುಮಕೂರಿಗೆ ಬಂದಿಳಿಯುವ ರಾಜನಾಥ ಸಿಂಗ್ ಮೊದಲಿಗೆ ಸ್ವಾಮೀಜಿ ಗದ್ದುಗೆಗೆ ಭೇಟಿ ನೀಡಿ ನಮಿಸಲಿದ್ದಾರೆ. ನಂತರ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಮಠದ ಕಿರಿಯ ಸ್ವಾಮೀಜಿ ಸಿದ್ದೇಶ್ವರ ಶ್ರೀ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ, ಸಚಿವರಾದ ಜಿ.ಪರಮೇಶ್ವರ, ಕೆ.ಎನ್.ರಾಜಣ್ಣ ಭಾಗವಹಿಸಲಿದ್ದಾರೆ.
ಪೂಜ್ಯ ಶಿವಕುಮಾರ ಸ್ವಾಮೀಜಿಯವರ ಗುರುವಂದನಾ ಹಾಗು 118ನೇ ಜಯಂತಿ ಹಿನ್ನೆಲೆಯಲ್ಲಿ ಮಠಕ್ಕೆ ಅಪಾರ ಪ್ರಮಾಣ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡಲಿದ್ದಾರೆ. ಹಾಗಾಗಿ ಮಠದ ಐದು ಕಡೆಗಳಲ್ಲಿ ದಾಸೋಹ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆಯಿಂದ ರಾತ್ರಿವರೆಗೂ ಪ್ರಸಾದ ವ್ಯವಸ್ಥೆ ಇರುತ್ತದೆ. ದಾಸೋಹದಲ್ಲಿ ಯಾವುದೇ ಲೋಪವಾಗದಂತೆ ಭಕ್ತರು ಎಲ್ಲಾ ರೀತಿಯಿಂದ ಸಿದ್ಧತೆ ಮಾಡಿಕೊಂಡಿದ್ದಾರೆ.