ಕೆಎನ್ಎನ್ಡಿಜಿಟಲ್ ಡೆಸ್ಕ್ : ನಿರ್ಭಯದಂತಹ ಕಠಿಣ ಕಾನೂನುಗಳಿದ್ರೂ, ದೇಶದಲ್ಲಿ ದೌರ್ಜನ್ಯಗಳು ಮರುಕಳಿಸುತ್ತಲೇ ಇವೆ. ಹುಡುಗಿಯರು ಮತ್ತು ಮಹಿಳೆಯರ ಮೇಲೆ ದಿನೇ ದಿನೇ ಅತ್ಯಚಾರ ಪ್ರಕರಣಗಳು ಹೆಚ್ಚುತ್ತಿವೆ. ರಕ್ಕಸರು ತಮ್ಮ ಪೈಶಾಚಿಕತನ ಮೆರೆಯುತ್ತಿದ್ದಾರೆ.
ಇತ್ತೀಚೆಗಷ್ಟೇ ಜಾರ್ಖಂಡ್’ನಲ್ಲಿ ಮತ್ತೋರ್ವ ಯುವತಿ ಪುರುಷರ ಕಾಮ ದಹಕ್ಕೆ ಬಲಿಯಾಗಿದ್ದಾಳೆ. ಸ್ನೇಹಿತರೊಂದಿಗೆ ಕಾಲ ಕಳೆಯಲು ಹೋದ ಮಹಿಳಾ ಸಾಫ್ಟ್ವೇರ್ ಇಂಜಿನಿಯರ್ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಅಕ್ಟೋಬರ್ 20 ರಂದು ನಡೆದ ಈ ಭಯಾನಕ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪೊಲೀಸರ ಪ್ರಕಾರ, ಸಂತ್ರಸ್ತೆ ಪ್ರಮುಖ ಐಟಿ ಕಂಪನಿಯಲ್ಲಿ ಮನೆಯಿಂದಲೇ ಕೆಲಸ ಮಾಡುತ್ತಿದ್ದಾಳೆ. ಅಕ್ಟೋಬರ್ 20ರ ಸಂಜೆ, ಅವಳು ತನ್ನ ಸ್ನೇಹಿತನೊಂದಿಗೆ ಸ್ಕೂಟರ್ನಲ್ಲಿ ಚೈಬಾಸಾದ ಉಪನಗರದಲ್ಲಿರುವ ವಿಮಾನ ನಿಲ್ದಾಣ ಪ್ರದೇಶಕ್ಕೆ ಹೋಗಿದ್ದಾಳೆ. ಈ ವೇಳೆ
ಅವ್ರನ್ನ ಗಮನಿಸಿದ ಹತ್ತು ದುಷ್ಕರ್ಮಿ ಯುವಕರ ಗುಂಪು, ಆಕೆಯ ಸ್ನೇಹಿತ ಮೇಲೆ ಹಲ್ಲೆ ನಡೆಸಿ, ಯುವತಿಯನ್ನ ಅಪಹರಿಸಿದ್ದಾರೆ. ನಂತ್ರ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಹತ್ತು ಮಂದಿ ಪುಂಡರು ಆಕೆಯನ್ನ ಮೇಲೆ ಅತ್ಯಾಚಾರ ನಡೆಸಿದ್ದಾರೆ. ಯುವತಿ ಪ್ರಜ್ಞಾಹೀನಳಾದಾಗ ಆಕೆಯ ಪರ್ಸ್ನಲ್ಲಿದ್ದ ನಗದು ಹಾಗೂ ಮೊಬೈಲ್ ತೆಗೆದುಕೊಂಡು ಓಡಿ ಹೋಗಿದ್ದಾರೆ.
ಬಳಿಕ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಸಂತ್ರಸ್ತೆ ಚೇತರಿಸಿಕೊಂಡು ಮನೆಗೆ ತೆರಳಿ ಘಟನೆಯ ಬಗ್ಗೆ ಕುಟುಂಬಸ್ಥರಿಗೆ ತಿಳಿಸಿದ್ದಾರೆ. ನಂತ್ರ ಯುವತಿ ತನ್ನ ಕುಟುಂಬದ ಸದಸ್ಯರೊಂದಿಗೆ ಪೊಲೀಸರಿಗೆ ದೂರು ನೀಡಿದ್ದಾಳೆ. ಯುವತಿಯ ದೂರಿನ ಮೇರೆಗೆ ಪ್ರಕರಣ ದಾಖಲಾಗಿದ್ದು, ಘಟನೆಯಲ್ಲಿ 12 ಮಂದಿ ಶಂಕಿತರನ್ನ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಘಟನೆ ಜಾರ್ಖಂಡ್ ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸ್ಥಳೀಯರು, ಸಾರ್ವಜನಿಕ ಸಂಘ ಸಂಸ್ಥೆಗಳು ಹಾಗೂ ವಿವಿಧ ಪಕ್ಷಗಳು ಒತ್ತಾಯಿಸುತ್ತಿವೆ.