ಬೆಂಗಳೂರು: ಗ್ರಾಮೀಣ ಪ್ರದೇಶಗಳ ಆಸ್ತಿಗಳಿಗೆ ಸಂಬಂಧಿಸಿದದಂತೆ ಗ್ರಾಮ ಪಂಚಾಯತಿಗಳು ವಿತರಿಸುತ್ತಿರುವ ಇ-ಸ್ವತ್ತು ದಾಖಲೆ ಪಡೆಯುವಲ್ಲಿ ವಿಳಂಬವಾಗುತ್ತಿರುವ ಬಗ್ಗೆ ಸಾಕಷ್ಟು ದೂರುಗಳು ಬರುತ್ತಿದ್ದು, ಸಂಬಂಧಿಸಿದ ತಂತ್ರಜ್ಞಾನವನ್ನು ಅಳವಡಿಸಿರುವ ಕೇಂದ್ರ ಸರ್ಕಾರದ ಎನ್.ಐ.ಸಿ ಸೇವೆಯನ್ನು ರದ್ದು ಮಾಡಲು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.
ಗ್ರಾಮೀಣ ರೈತರ ಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕಿದ್ದ ಇ-ಸ್ವತ್ತು ಕಾರ್ಯಕ್ರಮ ಕಳೆದ ಎಂಟು ತಿಂಗಳಿಂದ ಒಂದಲ್ಲ ಒಂದು ಕಾರಣಕ್ಕೆ ಸಮರ್ಪಕವಾಗಿ ಕಾರ್ಯನಿರ್ವಹಿಸದಿದ್ದರೂ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳದಿರುವುದನ್ನು ಸಚಿವರು ಆಕ್ಷೇಪಿಸಿದರಲ್ಲದೆ ತಕ್ಷಣವೇ ಪರ್ಯಾಯ ಕ್ರಮಗಳನ್ನು ತೆಗೆದುಕೊಂಡು ವಿಳಂಬವಿಲ್ಲದೆ ಹಾಗೂ ಭ್ರಷ್ಟಾಚಾರರಹಿತವಾಗಿ ಇ-ಸ್ವತ್ತು ದಾಖಲೆಗಳನ್ನು ನೀಡುವಂತೆ ಮಾರ್ಪಾಡುಗಳನ್ನು ತರಬೇಕೆಂದು ಸಚಿವರು ಸೂಚಿಸಿದರು.
ಕಾರ್ಯಕ್ರಮವನ್ನು ಸಬಲೀಕರಣಗೊಳಿಸುವದರೊಂದಿಗೆ ಸರಳೀಕರಣಗೊಳಿಸಲು ಸೂಚಿಸಿದ ಸಚಿವರು ಭ್ರಷ್ಟಾಚಾರರಹಿತವಾಗಿ ಜನರು ಇ-ಸ್ವತ್ತುದಾಖಲೆಗಳನ್ನು ಶೀಘ್ರಗತಿಯಲ್ಲಿ ಪಡೆದುಕೊಳ್ಳುವಂತೆ ವ್ಯವಸ್ಥೆಗೆ ಕಾಯಕಲ್ಪ ನೀಡಲು ತಕ್ಷಣವೇ ಕ್ರಮ ಕೈಗೊಳ್ಳಬೇಕೆಂದು ಹೇಳಿದರು.
ತಂತ್ರಜ್ಞಾನ ಕೇತ್ರದಲ್ಲಿ ಸಾಕಷ್ಟು ಅಭಿವೃದ್ಧಿಯಾಗಿದ್ದರೂ, ಕೇಂದ್ರ ಸರ್ಕಾರದ ಎನ್.ಐ.ಸಿ ಸಂಸ್ಥೆ ತಂತ್ರಜ್ಞಾನ ಅಳವಡಿಕೆಯಲ್ಲಿ ಇನ್ನೂ ಬಹಳಷ್ಟು ಹಿಂದೆ ಇರುವುದರಿಂದ ನಮ್ಮ ಗ್ರಾಮೀಣ ರೈತರು ತೊಂದರೆಗೊಳಗಾಗಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದ ಸಚಿವರು ಇ-ಸ್ವತ್ತು ನೀಡಿಕೆಯಲ್ಲಿ ಆಗುತ್ತಿರುವ ವಿಳಂಬ ಗತಿ ಹಾಗೂ ಮತ್ತಿತರ ಕಾರಣಗಳು ಇಡೀ ಗ್ರಾಮೀಣಾಭಿವೃದ್ಧಿ ಇಲಾಖೆಯ ಆಡಳಿತ ಯಂತ್ರದ ಮೇಲೆ ಪರಿಣಾಮ ಬೀರುತ್ತದೆಂದು ಸಚಿವರು ಎಚ್ಚರಿಸಿದರು.
ಸಭೆಯಲ್ಲಿ ಪಂಚಾಯತ್ ರಾಜ್ ಆಯುಕ್ತೆ ಡಾ.ಅರುಂಧತಿ ಚಂದ್ರಶೇಖರ್, ಇ-ಗೌರ್ನೆನ್ಸ್ ನಿರ್ದೇಶಕಿ ಡಾ.ನಂದಿನಿದೇವಿ ಹಾಗು ಇನ್ನಿತರ ಅಧಿಕಾರಿಗಳು ಸಭೆಯಲ್ಲಿದ್ದರು.
ಎತ್ತಿನಹೊಳೆ ಯೋಜನೆ: ಹತ್ತು ವರ್ಷಗಳ ಭಗೀರಥ ಪ್ರಯತ್ನ ಸಾಕಾರ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರಲ್ಲಿ ಗಣೇಶ ಮೂರ್ತಿ ವಿಸರ್ಜನೆಗೆ ಬಿಬಿಎಂಪಿಯಿಂದ ಸಕಲ ಸಿದ್ಧತೆ: 462 ತಾತ್ಕಾಲಿಕ ಮೊಬೈಲ್ ಟ್ಯಾಂಕ್ ವ್ಯವಸ್ಥೆ