ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಹಿಂದುಳಿದ ವರ್ಗ ಮತ್ತು ದಲಿತ ಹಾಗೂ ಶೋಷಿತ ಸಮುದಾಯಗಳ ಸಮಾಜಗಳ ಒಕ್ಕೂಟದಿಂದ ಸ್ವಾಮೀಜಿಗಳು ಭೇಟಿ ಮಾಡಿ ಒಕ್ಕೋರಲ್ಲಿನಿಂದ ಸಿಎಂ ಸಿದ್ದರಾಮಯ್ಯ ಅವರಿಗೆ ನೈತಿಕ ಬೆಂಬಲ ಸೂಚಿಸಿದ್ದಾರೆ.
ಹೌದು ಇಂದು ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಸ್ವಾಮೀಜಿಗಳ ನಿಯೋಗವು, ಹಿಂದುಳಿದ ವರ್ಗ ಮತ್ತು ದಲಿತ ಹಾಗೂ ಶೋಷಿತ ಸಮುದಾಯಗಳ ಸಮಾಜಗಳ ಒಕ್ಕೂಟದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿತು. ಈ ವೇಳೆ ಸ್ವಾಮೀಜಿಗಳು ಸಿಎಂ ಸಿದ್ದರಾಮಯ್ಯಗೆ ಬೇಷರತ್ ನೈತಿಕ ಬೆಂಬಲ ಘೋಷಿಸಿದರು.
ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಕೇಂದ್ರ ಸರ್ಕಾರ ಮತ್ತು ರಾಜಭವನದ ಷಡ್ಯಂತರಗಳನ್ನು ಈ ವೇಳೆ ಸ್ವಾಮೀಜಿಗಳು ತೀವ್ರವಾಗಿ ಖಂಡಿಸಿದ್ದಾರೆ. ಷಡ್ಯಂತರದ ವಿರುದ್ಧ ಒಕ್ಕೊರಲಿನಿಂದ ಸಿಎಂ ಸಿದ್ದರಾಮಯ್ಯ ಅವರಿಗೆ ಬೆಂಬಲ ಸೂಚಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಬೆಂಬಲಕ್ಕೆ ನಿಂತು ಹೋರಾಟ ನಡೆಸುವುದಾಗಿ ಘೋಷಿಸಿದ್ದಾರೆ. ನಿಯೋಗದಲ್ಲಿರುವ ಹಲವು ಸ್ವಾಮೀಜಿಗಳು ಸಿಎಂ ಸಿದ್ದರಾಮಯ್ಯ ಬೆನ್ನಿಗೆ ನಿಂತಿದ್ದಾರೆ.
ನಿರಂಜನಾನಂದ ಪುರಿ ಸ್ವಾಮೀಜಿ ಕನಕ ಪೀಠ ಕಾಗಿನೆಲೆ, ಶಾಂತವೀರ ಸ್ವಾಮೀಜಿ ಕುಂಚಿಟಿಗ ಸಂಸ್ಥಾನ ಮಠ ಹೊಸದುರ್ಗ, ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಭೋವಿ ಗುರುಪೀಠ ಚಿತ್ರದುರ್ಗ, ಮಾದರ ಚೆನ್ನಯ್ಯ ಗುರು ಪೀಠದ ಬಸವ ಮೂರ್ತಿ ಚೆನ್ನಯ್ಯ ಸ್ವಾಮೀಜಿ, ಪುರುಷೋತ್ತಮಾನಂದಪುರಿ ಸ್ವಾಮೀಜಿ ಭಗೀರಥ ಪೀಠ ಮಧುರೆ, ಈಶ್ವರಾನಂದ ಪುರಿ ಸ್ವಾಮೀಜಿ ಕನಕ ಗುರುಪೀಠ ಹೊಸದುರ್ಗ, ರೇಣುಕಾನಂದ ಸ್ವಾಮೀಜಿ ನಾರಾಯಣ ಗುರುಪೀಠ ಶಿವಮೊಗ್ಗ, ಬಸವ ಮಾಚಿದೇವ ಸ್ವಾಮೀಜಿ ಮಡಿವಾಳ ಗುರುಪೀಠ ಚಿತ್ರದುರ್ಗ, ಅನ್ನದಾನಿ ಭಾರತಿ ಅಪ್ಪಣ್ಣ ಗುರುಪೀಠ ವಿಜಯನಗರ ಜಿಲ್ಲೆಯ ಸರೂರಿನ ಶಾಂತಯ್ಯ ಸ್ವಾಮೀಜಿ ಗಳು ಬೆಂಬಲ ಸೂಚಿಸಿದ್ದಾರೆ.