ನವದೆಹಲಿ: ಮಂಕಿಪಾಕ್ಸ್ ಹರಡುವುದನ್ನು ನಿಯಂತ್ರಿಸುವ ಸಲುವಾಗಿ ವಿಮಾನ ನಿಲ್ದಾಣದಲ್ಲಿ ಕಟ್ಟುನಿಟ್ಟಾಗಿ ಕ್ರಮಕೈಗೊಂಡಿದ್ದಾರೆ. ಹೀಗಾಗಿ ವಿಮಾನ ನಿಲ್ದಾಣದಲ್ಲಿ ಬರುವ ಪ್ರಯಾಣಿಕರಿಗೆ ಆರೋಗ್ಯ ತಪಾಸಣೆ ಮಾಡಲಾಗಿದೆ.
ಜು. 30 ರಂದು ಯದುಗಿರಿ ಯತಿರಾಜ ಶ್ರೀಗಳಿಗೆ ತುಮಕೂರು VV ಗೌರವ ಡಾಕ್ಟರೇಟ್ ಪ್ರದಾನ
ಈ ವೇಳೆ ಅವರಿಗೆ ಸೋಂಕಿನ ರೋಗಲಕ್ಷಣಗಳು ಕಂಡುಬಂದಲ್ಲಿ ಲೋಕ ನಾಯಕ್ ಜೈ ಪ್ರಕಾಶ್ (ಎಲ್ಎನ್ಜೆಪಿ) ಆಸ್ಪತ್ರೆಗೆ ಕಳುಹಿಸುತ್ತದೆ ಎಂದು ಮಾಹಿತಿ ನೀಡಿದೆ.ದೆಹಲಿಯ ಐಜಿಐ ವಿಮಾನ ನಿಲ್ದಾಣದಲ್ಲಿ ತೀವ್ರ ಜ್ವರ, ಬೆನ್ನು ನೋವು ಮತ್ತು ಕೀಲು ನೋವಿನಂತಹ ರೋಗಲಕ್ಷಣಗಳನ್ನು ಹೊಂದಿರುವ ಪ್ರಯಾಣಿಕರನ್ನು ಎಲ್ಎನ್ಜೆಪಿ ಆಸ್ಪತ್ರೆಯ ಐಸೋಲೇಷನ್ ವಾರ್ಡ್ ಗೆ ಕಳುಹಿಸಲಾಗುವುದು ಎಂದು ಮೂಲಗಳು ತಿಳಿಸಿವೆ.ಶಂಕಿತ ರೋಗಿಗಳ ಮಾದರಿಗಳನ್ನು ಪುಣೆಯ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿಗೆ ಕಳುಹಿಸಲಾಗುವುದು. ಆದರೆ ಜಿಲ್ಲಾಡಳಿತವು ಕುಟುಂಬ ಸದಸ್ಯರನ್ನು ಕ್ವಾರಂಟೈನ್ ಮಾಡುತ್ತದೆ ಮತ್ತು ಅಂತಹ ಶಂಕಿತ ರೋಗಿಗಳ ಸಂಪರ್ಕ ಪತ್ತೆಹಚ್ಚುವಿಕೆಯನ್ನು ನಡೆಸುತ್ತದೆ.