ನವ ದೆಹಲಿ: ಈ ವಾರದ ಆರಂಭದಲ್ಲಿ ಕೆಂಪುಕೋಟೆ ಬಳಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 13 ಕ್ಕೆ ಏರಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮೃತನನ್ನು ಬಿಲಾಲ್ ಎಂದು ಗುರುತಿಸಲಾಗಿದೆ ಎಂದು ಅವರು ಹೇಳಿದರು.
ದೆಹಲಿ ಪೊಲೀಸರ ಪ್ರಕಾರ, ಬಿಲಾಲ್ ಅವರ ಸಾವಿನ ಬಗ್ಗೆ ಗುರುವಾರ ಮುಂಜಾನೆ ಆಸ್ಪತ್ರೆಯಿಂದ ಮಾಹಿತಿ ಬಂದಿದೆ. ಮರಣೋತ್ತರ ಪರೀಕ್ಷೆ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಿಲಾಲ್ ಅವರ ಸಾವಿನೊಂದಿಗೆ, ಸೋಮವಾರ ಸಂಜೆ ಸಂಭವಿಸಿದ ಹೆಚ್ಚಿನ ತೀವ್ರತೆಯ ಸ್ಫೋಟದಲ್ಲಿ ಒಟ್ಟು ಸಾವಿನ ಸಂಖ್ಯೆ 13 ಕ್ಕೆ ಏರಿದೆ, ಇನ್ನೂ ಹಲವರು ಚಿಕಿತ್ಸೆಯಲ್ಲಿದ್ದಾರೆ.
ದೆಹಲಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಉಮರ್ ನಬಿ ಕಾರು ಚಲಾಯಿಸುತ್ತಿದ್ದ ಎಂದು ಡಿಎನ್ಎ ಪರೀಕ್ಷೆಯಿಂದ ದೃಢಪಟ್ಟಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ








