ನವದೆಹಲಿ : ಇಲ್ಲಿನ ಬುರಾರಿ ಸರ್ಕಾರಿ ಆಸ್ಪತ್ರೆ ಮತ್ತು ಮಂಗೋಲ್ಪುರಿಯ ಸಂಜಯ್ ಗಾಂಧಿ ಆಸ್ಪತ್ರೆಯಲ್ಲಿ ಬಾಂಬ್ ಬೆದರಿಕೆ ಕೇಳಿ ಬಂದಿತ್ತು. ಇದಾದ ಬಳಿಕ ಅಂದರೆ 2 ಗಂಟೆ ಅಂತರದಲ್ಲೇ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಬಾಂಬ್ ಬೆದರಿಕೆಯ ಇಮೇಲ್ ಬಂದಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಸ್ವೀಕರಿಸಿದ 2 ಗಂಟೆಗಳ ಅಂತರದಲ್ಲೇ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಬಾಂಬ್ ಬೆದರಿಕೆ ಇಮೇಲ್ ಬಂದಿದೆ.ಕೂಡಲೇ ಎಚ್ಚೆತ್ತುಕೊಂಡಿರುವ ದೆಹಲಿ ಪೊಲೀಸರು ಅಗ್ನಿಶಾಮಕ ದಳದ ಅಧಿಕಾರಿಗಳೊಂದಿಗೆ ಶೋಧಕಾರ್ಯ ನಡೆಸುತ್ತಿದ್ದಾರೆ.
IGI ಟರ್ಮಿನಲ್-3 ರಲ್ಲಿ ಭಾನುವಾರ ಸಂಜೆ 6:19ಕ್ಕೆ ಕರೆ ಬಂದಿದೆ. ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳ, ಕ್ರೈಂ ಬ್ರಾಂಚ್ ಅಧಿಕಾರಿ ತಂಡಗಳು ಆಸ್ಪತ್ರೆಗೆ ತೆರಳಿ ಶೋಧಕಾರ್ಯ ನಡೆಸುತ್ತಿವೆ. ಮತ್ತೊಂದು ಕಡೆ ಇ-ಮೇಲ್ ಮೂಲವನ್ನು ತನಿಖೆ ನಡೆಸುತ್ತಿದ್ದಾರೆ. ಸದ್ಯ ಆಸ್ಪತ್ರೆ ಹೊರಗೆ ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.