ನವದೆಹಲಿ: ದೆಹಲಿಯ ಕೆಂಪುಕೋಟೆಯ ಮೆಟ್ರೋ ನಿಲ್ದಾಣದ ಬಳಿಯಲ್ಲಿ ಕಾರು ಸ್ಪೋಟ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.
ರಾಷ್ಟ್ರದ ರಾಜಧಾನಿ ದೆಹಲಿಯ ಕೆಂಪು ಕೋಟೆಯ ಮೆಟ್ರೋ ನಿಲ್ದಾಣದ ಬಳಿಯಲ್ಲಿ ಕಾರು ಸ್ಪೋಟಗೊಂಡು 10 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೇ ಹಲವರು ಗಾಯಗೊಂಡಿದ್ದಾರೆ.
ಸಾವನ್ನಪ್ಪಿದವರ ಮೃತ ದೇಹಗಳನ್ನು ಎಲ್ ಎನ್ ಜೆ ಪಿ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಬಾಂಬ್ ನಿಷ್ಕ್ರೀಯ ದಳದವರು ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ದೆಹಲಿ ಸ್ಫೋಟದ ಹಿನ್ನೆಲೆಯಲ್ಲಿ ಹಲವಾರು ರಾಜ್ಯಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ
ದೆಹಲಿ ಸ್ಫೋಟದ ನಂತರ ಬಿಹಾರದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಬಿಹಾರದಲ್ಲಿ ತಂಡಗಳು ಕಟ್ಟೆಚ್ಚರದಲ್ಲಿವೆ ಮತ್ತು ಎಲ್ಲರನ್ನೂ ಪರಿಶೀಲಿಸಲಾಗುತ್ತಿದೆ.
ದೆಹಲಿಯಲ್ಲಿ ಸ್ಫೋಟದ ನಂತರ ಚಂಡೀಗಢದಾದ್ಯಂತ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಪೊಲೀಸರು ಕಟ್ಟೆಚ್ಚರದಲ್ಲಿದ್ದಾರೆ.
ಕೇರಳ ಪೊಲೀಸ್ ಮುಖ್ಯಸ್ಥ ರವಾದ ಆಜಾದ್ ಚಂದ್ರಶೇಖರ್ ಅವರು ರಾಜ್ಯಾದ್ಯಂತ ಭದ್ರತೆಯನ್ನು ಬಲಪಡಿಸಲು ಪೊಲೀಸರಿಗೆ ನಿರ್ದೇಶನ ನೀಡಿದ್ದಾರೆ.
ಹರಿಯಾಣದಲ್ಲಿಯೂ ಎಚ್ಚರಿಕೆ ನೀಡಲಾಗಿದೆ. ಸರ್ಕಾರವು ಎಲ್ಲಾ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳಿಗೆ ಸೂಚನೆಗಳನ್ನು ನೀಡಿದೆ.
ಪೊಲೀಸ್ ಮಹಾನಿರ್ದೇಶಕ ರಾಜೀವ್ ಕೃಷ್ಣ ಅವರಿಂದ ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಉತ್ತರ ಪ್ರದೇಶದಲ್ಲಿ ಇಡೀ ಪೊಲೀಸ್ ಪಡೆಗಳನ್ನು ಕಟ್ಟೆಚ್ಚರದಲ್ಲಿಡಲು ಮತ್ತು ತೀವ್ರ ತಪಾಸಣೆ ಮತ್ತು ಭದ್ರತಾ ವ್ಯವಸ್ಥೆಗಳನ್ನು ಖಚಿತಪಡಿಸಿಕೊಳ್ಳಲು ಸೂಚನೆಗಳನ್ನು ನೀಡಿದ್ದಾರೆ.








