ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (Enforcement Directorate -ED) ನೀಡಿದ ಎಲ್ಲಾ ಸಮನ್ಸ್ ಗಳನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ( Delhi chief minister Arvind Kejriwal ) ಮಂಗಳವಾರ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಆಮ್ ಆದ್ಮಿ ಪಕ್ಷದ (Aam Aadmi Party -AAP) ಸಂಚಾಲಕರ ಮನವಿಯನ್ನು ಹೈಕೋರ್ಟ್ನ ವಿಭಾಗೀಯ ಪೀಠ ಬುಧವಾರ ವಿಚಾರಣೆ ನಡೆಸಲಿದೆ.
ಅಬಕಾರಿ ನೀತಿ-ಸಂಬಂಧಿತ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಗುರುವಾರ ಅಂದರೆ ಮಾರ್ಚ್ 21 ರಂದು ವಿಚಾರಣೆಗೆ ಹಾಜರಾಗುವಂತೆ ಕೇಂದ್ರ ಸಂಸ್ಥೆ ಭಾನುವಾರ ಕೇಜ್ರಿವಾಲ್ ಅವರಿಗೆ ಒಂಬತ್ತನೇ ಸಮನ್ಸ್ ನೀಡಿತ್ತು.
ಈ ಪ್ರಕರಣದಲ್ಲಿ ಹಿಂದಿನ ಎಂಟು ಸಮನ್ಸ್ಗಳಲ್ಲಿ 6 ತಪ್ಪಿಸಿಕೊಂಡಿದ್ದಕ್ಕಾಗಿ ಅವರ ವಿರುದ್ಧ ಇಡಿ ಸಲ್ಲಿಸಿದ ಎರಡು ದೂರುಗಳ ಮೇರೆಗೆ ದೆಹಲಿ ನ್ಯಾಯಾಲಯವು ದೆಹಲಿ ಸಿಎಂಗೆ ಜಾಮೀನು ನೀಡಿದ ಒಂದು ದಿನದ ನಂತರ ಈ ಸಮನ್ಸ್ ಹೊರಡಿಸಲಾಗಿದೆ.
BREAKING: ರಾಜ್ಯ ‘ಶಾಲಾ ಶಿಕ್ಷಣ ಇಲಾಖೆ’ಯಿಂದ ‘ದ್ವಿತೀಯ PUC ಪರೀಕ್ಷೆ-1’ರ ಪ್ರಶ್ನೆಪತ್ರಿಗಳ ‘ಮಾದರಿ ಉತ್ತರ’ ಪ್ರಕಟ
ಮಿಸ್ಟರ್ ಡಿ.ಕೆ.ಶಿವಕುಮಾರ್, ಇವತ್ತು ‘ಜೆಡಿಎಸ್-ಬಿಜೆಪಿ ಮೈತ್ರಿ’ಗೆ ನೀವೇ ಕಾರಣ – H.D ಕುಮಾರಸ್ವಾಮಿ ಕಿಡಿ