ನವದೆಹಲಿ : ಇಂದು ಈಶಾನ್ಯ ದೆಹಲಿಯ ಮುಸ್ತಫಾಬಾದ್ ಪ್ರದೇಶದಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿದು ದುರಂತ ಸಂಭವಿಸಿದೆ. ಸ್ಥಳಕ್ಕೆ ಅಗ್ಬಿಶಾಮಕ ಸಿಬ್ಬಂದಿ ದೌಡಾಹಿಸಿದ್ದು, ಕಾರ್ಯಾಚರಣೆ ಕೈಗೊಂಡಿದ್ದಾರೆ.
ಮುಂಜಾನೆ 5 ಗಂಟೆ ಸುಮಾರಿಗೆ ಘಟನೆ ವರದಿಯಾಗಿದ್ದು, ಮೂರು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿವೆ. ಇದುವರಗೆ ನಾಲ್ವರನ್ನು ರಕ್ಷಿಸಲಾಗಿದ್ದು, ಕಟ್ಟಡದ ಕೆಳಗೆ ಸಿಲುಕಿರುವವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ದೆಹಲಿ ಅಗ್ನಿಶಾಮಕ ಇಲಾಖೆ ನಿರ್ದೇಶಕ ಅತುಲ್ ಗರ್ಗ್ ತಿಳಿಸಿದ್ದಾರೆ.
BIGG NEWS : ಬಾಗೇಪಲ್ಲಿ ಕ್ಷೇತ್ರದಿಂದ ಸ್ಪರ್ಧಿಸುವಂತೆ ಮಾಜಿ ಸಿಎಂ ಸಿದ್ದರಾಮಯ್ಯಗೆ ಆಹ್ವಾನ!
ದೆಹಲಿಯಲ್ಲಿ ಪದೇ ಪದೇ ಇಂತಹ ಘಟನೆಗಳು ವರದಿಯಾಗುತ್ತಿವೆ. ಕಳೆದ ಜುಲೈ 15 ರಂದು ದೆಹಲಿಯ ಅಲಿಪುರ್ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿರುವ ಗೋಡೌನ್ನ ಗೋಡೆ ಕುಸಿದು ಐವರು ಸಾವನ್ನಪ್ಪಿ, ಒಂಬತ್ತು ಮಂದಿ ಗಾಯಗೊಂಡಿದ್ದರು.
ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ ಗೋಡೆ ಕುಸಿತದ ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿದ್ದು, ಜೂನಿಯರ್ ಇಂಜಿನಿಯರ್ ಮತ್ತು ಸಹಾಯಕ ಇಂಜಿನಿಯರ್ ಅನ್ನು ಅಮಾನತುಗೊಳಿಸಿದೆ ಎನ್ನಲಾಗುತ್ತಿದೆ.
ಪೌರಾಯುಕ್ತರ ಆದೇಶದ ಮೇರೆಗೆ ತನಿಖೆಗೆ ಆದೇಶಿಸಲಾಗಿದ್ದು, ಬಾಕೋಲಿ ಗ್ರಾಮದಲ್ಲಿ ನಡೆದ ಅಹಿತಕರ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳಲಾಗಿದೆ. ಪ್ರಕರಣ ದಾಖಲಿಸಿಕೊಂಡು ಇಬ್ಬರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.