ನವದೆಹಲಿ: 33 ವರ್ಷದ ಮಹಿಳೆಯೊಬ್ಬರು ಎಂಟು ವರ್ಷಗಳ ಅವಧಿಯಲ್ಲಿ 14 ಬಾರಿ ತನ್ನ ಲಿವ್-ಇನ್ ಪಾಲುದಾರನಿಂದ ಬಲವಂತದ ಗರ್ಭಪಾತಕ್ಕೆ ಒಳಗಾಗಿದ್ದು, ಕೊನೆಗೆ ಆತನಿಂದ ಮೋಸ ಮೋಸ ಹೋದ ಕಾರಣ, ಪತ್ರ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಜುಲೈ 5 ರಂದು ಆಗ್ನೇಯ ದೆಹಲಿಯ ಜೈತ್ಪುರ ಪ್ರದೇಶದಲ್ಲಿ ಈ ಘಟನೆ ನಡೆದಿದೆ.
ಹಿಂದಿಯಲ್ಲಿ ಬರೆದಿರುವ ಸೂಸೈಡ್ ನೋಟ್ನಲ್ಲಿ, ಮದುವೆಯಾಗುವುದಾಗಿ ಭರವಸೆ ನೀಡಿ ತನ್ನೊಂದಿಗೆ ದೈಹಿಕ ಸಂಬಂಧ ಬೆಳೆಸಿದ ವ್ಯಕ್ತಿಯೊಂದಿಗೆ ಲಿವ್-ಇನ್ ಸಂಬಂಧವನ್ನು ಹೊಂದಿದ್ದಾಗಿ ಮಹಿಳೆ ಆರೋಪಿಸಿದ್ದಾಳೆ. ಆತ ನನ್ನನ್ನು ಮದುವೆಯಾಗಲು ನಿರಾಕರಿಸಿದ್ದಾನೆ. ಆತ್ಮಹತ್ಯೆ ಬಿಟ್ಟು ನನಗೆ ಬೇರೆ ದಾರಿಯಿಲ್ಲ ಎಂದು ಬರೆದಿದ್ದಾಳೆ. ಆಕೆ ತನ್ನ ಪತಿಯಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.
ನೋಯ್ಡಾದ ಸಾಫ್ಟ್ವೇರ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವ ವ್ಯಕ್ತಿಯ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮೃತಳ ಮೊಬೈಲ್ ಫೋನ್ ಅನ್ನು ವಶಪಡಿಸಿಕೊಂಡಿರುವ ಪೊಲೀಸರು, ಪ್ರಾಥಮಿಕ ವಿಚಾರಣೆಯ ನಂತರ ಮಹಿಳೆ ಕಳೆದ ಎಂಟು ವರ್ಷಗಳಿಂದ ಪತಿಯಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ ಎಂದು ತಿಳಿದುಬಂದಿದೆ ಎಂದಿದ್ದಾರೆ.
ಬಿಹಾರದ ಮುಜಾಫರ್ಪುರದಲ್ಲಿ ನೆಲೆಸಿರುವ ಆಕೆಯ ಪೋಷಕರಿಗೆ ಮಾಹಿತಿ ನೀಡಲಾಗಿದ್ದು, ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಅವರಿಗೆ ಹಸ್ತಾಂತರಿಸಲಾಗಿದೆ ಎಂದು ಡಿಸಿಪಿ ತಿಳಿಸಿದ್ದಾರೆ.
Breaking news: 1985ರ ಏರ್ ಇಂಡಿಯಾ ಬಾಂಬ್ ಸ್ಫೋಟ ಪ್ರಕರಣದ ಆರೋಪಿಗೆ ಗುಂಡಿಕ್ಕಿ ಹತ್ಯೆ: ವರದಿ