ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀಗಳ ಜೈಲುಪಾಲಾಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮ ಕೂಟದ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ, ಅರದ ಜೊತೆಗೆ ಮಠಕ್ಕೆ ಹೊಸ ಆಡಳಿತಾಧಿಕಾರಿ ನೇಮಿಸುವಂತೆ ಆಗ್ರಹಿಸಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಸಾಮಾಜಿಕ ಕಾರ್ಯಕರ್ತ ಡಾ.ಮಧುಕುಮಾರ್ ದೂರು ನೀಡಿದ್ದಾರೆ.
BIGG NEWS: ಸಿದ್ದರಾಮಯ್ಯ ಸೋಲಿಸಲು ಬಿಜೆಪಿ ರಣತಂತ್ರ; ವರುಣಾದಲ್ಲಿ ವಿಜಯೇಂದ್ರ ಕಣಕ್ಕಿಳಿಸಲು ಹೈಕಮಾಂಡ್ ಪ್ಲ್ಯಾನ್
ಮುರುಘಾ ಶ್ರೀ ವಿರುದ್ಧ 3ನೇ ಪೋಕ್ಸೋ ಪ್ರಕರಣ ದಾಖಲಾದ ಹಿನ್ನೆಲೆ ಪ್ರಭಾರ ಪೀಠಾಧ್ಯಕ್ಷರ ನೇಮಕಕ್ಕೆ ನಿರ್ಧಾರ ಮಾಡಲಾಗಿದ್ದು, ದಾವಣಗೆರೆಯ ವಿರಕ್ತ ಮಠದ ಬಸವಪ್ರಭು ಶ್ರೀ ಹೆಸರನ್ನು ಅಂತಿಮಗೊಳಿಸಲಾಗಿದೆ. ನಿವೃತ್ತ ನ್ಯಾ. ವಸ್ತ್ರದಮಠ, ಸಿದ್ದಾಪುರ ನಾಗರಾಜ್, ಜೀತೇಂದ್ರ ಸೇರಿ ಹಲವರಿಂದ ಧಾರ್ಮಿಕ ಚಟುವಟಿಕೆಗೆ ಅಡ್ಡಿಯಾಗುತ್ತಿದೆ. ಮಠದ ಕೋಟ್ಯಂತರ ಹಣ ದುರುಪಯೋಗ ಆಗುತ್ತಿದೆ ಎಂದು ಪತ್ರದಲ್ಲಿ ಆರೋಪಿಸಿದ್ದಾರೆ.