ಬೆಳಗಾವಿ: ಬೆಳಗಾವಿ ಸುವರ್ಣಸೌಧದಲ್ಲಿ ಪಂಚಮಸಾಲಿ 2ಎ ಮೀಸಲಾತಿ ಒತ್ತಾಯಿಸಿ ಬೆಳಗಾವಿ ಸುವರ್ಣ ವಿಧಾನಸೌಧದ ಎದುರು ಪಂಚಮಸಾಲಿ ಸಮಾಜದಿಂದ ವಿರಾಟ್ ಸಮಾವೇಶ ಆರಂಭವಾಗಿದೆ.
ಮೀಸಲಾತಿಗಾಗಿ ಆಗ್ರಹಿಸಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕುವ ಮುನ್ನ ಕೂಡಲಸಂಗಮ ಪಂಚಮಸಾಲಿ ಬಸವಜಯ ಮೃತ್ಯುಂಜಯ ಸ್ವಾಮೀಜನಿ ನೇತೃತ್ವದಲ್ಲಿ ಪಂಚಮಸಾಲಿ ಸಮುದಾಯದ ವಿರಾಟ್ ಸಮಾವೇಶ ಆರಂಭವಾಗಿದೆ. ಸಂಪುಟ ಸಭೆ ಬಳಿಕ ಸಿಎಂ ಬೊಮ್ಮಾಯಿ ಮೀಸಲಾತಿ ಘೋಷಣೆ ಮಾಡಲಿದ್ದಾರಾ..? ಪಂಚಮಸಾಲಿ ಹೋರಾಟ ಯಾವ ರೀತಿ ಕೊನೆಯಾಗುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.
ಅಧಿವೇಶನದಲ್ಲಿ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಲು ಒತ್ತಾಯಿಸಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಸುವರ್ಣಸೌಧ ಮುಂಭಾಗ ನೂರು ಎಕರೆ ಪ್ರದೇಶದಲ್ಲಿ ಸಮಾವೇಶ ವೇದಿಕೆ ಸಿದ್ದತೆ ಮಾಡಲಾಗಿದೆ. 20 ಲಕ್ಷಕ್ಕೂ ಹೆಚ್ಚು ಜನರು ಸೇರುವುದರಿಂದ ಭಾರಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.ಹೀರೆ ಬಾಗೇವಾಡಿ ಗ್ರಾಮದಿಂದ ಪ್ರತಿಭಟನೆ ಸ್ಥಳದವರಗೆ ದಾರಿ ಉದ್ದಕ್ಕೂ ಮೂರು ಸಾವಿರ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಪ್ರತಿಭಟನೆಯಲ್ಲಿ ಪಂಚಮಸಾಲಿ ಹಲವು ಶಾಸಕರು ಹಾಗೂ ಮಠಾಧೀಶರು ಭಾಗಿಯಾಗಲಿದ್ದಾರೆ.
‘ಆಪರೇಷನ್ ಚೀತಾ’ ಸಕ್ಸಸ್ : ಒಂದೇ ದಿನ ಬೋನಿಗೆ ಬಿದ್ದ ಎರಡು ಚಿರತೆ |Leopard Operation