ವೇತನ ಪಾವತಿಗೆ ಆಗ್ರಹ: GBA ಪಶ್ಚಿಮ ನಗರ ಪಾಲಿಕೆ ಕೆಲಸ ಸ್ಥಗಿತದ ಎಚ್ಚರಿಕೆ ನೀಡಿದ ಕ್ಷೇಮಾಭಿವೃದ್ಧಿ ಸಂಘ

ಬೆಂಗಳೂರು: ಫೆಬ್ರವರಿ ತಿಂಗಳ ವೇತನ ಇನ್ನೂ ಪಾವತಿಯಾಗದ ಹಿನ್ನೆಲೆಯಲ್ಲಿ, ಗ್ರೇಟರ್ ಬೆಂಗಳೂರು ಪ್ರಾಧಿಕಾರ – ಪಾಲಿಕೆಗಳ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘವು ಬೆಂಗಳೂರು ಪಶ್ಚಿಮ ನಗರ ಪಾಲಿಕೆಯ ಆಯುಕ್ತರಿಗೆ ಮಂಗಳವಾರ ಮನವಿ ಸಲ್ಲಿಸಿದ್ದು, ಕೂಡಲೇ ಕ್ರಮ ಕೈಗೊಳ್ಳದಿದ್ದರೆ ಕೆಲಸ ಸ್ಥಗಿತಗೊಳಿಸುವುದಾಗಿ ಎಚ್ಚರಿಸಿದೆ. ಮಾರ್ಚ್ 10 ಕಳೆದರೂ ನೌಕರರ ಕೈಗೆ ವೇತನ ಸಿಕ್ಕಿಲ್ಲದಿರುವುದು ಸಿಬ್ಬಂದಿ ವರ್ಗದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ಸಂಬಂಧ ಸಂಘದ ಅಧ್ಯಕ್ಷರಾದ ಎ. ಅಮೃತ್ ರಾಜ್ ಅವರು ಅಧಿಕೃತವಾಗಿ ಆಯುಕ್ತರಿಗೆ ಪತ್ರ ಬರೆದಿದ್ದಾರೆ. … Continue reading ವೇತನ ಪಾವತಿಗೆ ಆಗ್ರಹ: GBA ಪಶ್ಚಿಮ ನಗರ ಪಾಲಿಕೆ ಕೆಲಸ ಸ್ಥಗಿತದ ಎಚ್ಚರಿಕೆ ನೀಡಿದ ಕ್ಷೇಮಾಭಿವೃದ್ಧಿ ಸಂಘ