ಕಲಬುರಗಿ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಲಾಗುತ್ತಿದ್ದೂ, ಕಲಬುರ್ಗಿ ಪೊಲೀಸ್ ಆಯುಕ್ತ ಆರ್ ಚೇತನ್ಗೆ ಕಲಬುರ್ಗಿ ಜಿಲ್ಲಾ ಘಟಕದ ಕಾಂಗ್ರೆಸ್ ಅಧ್ಯಕ್ಷ ಜಗದಗುತ್ತೇದಾರ್ ದೂರು ಸಲ್ಲಿಸಿದ್ದಾರೆ.
ಖರ್ಗೆ ಅವರನ್ನು ಚಕ್ರವರ್ತಿ ಸೂಲಿಬೆಲೆ ಅವಾಚ್ಯ ಶಬ್ದದಿಂದ ನಿಂದಿಸಿದ್ದಾರೆಂದು ಆರೋಪಿಸಿದ್ದಾರೆ. ಇದೀಗ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಅವರು ಆಗ್ರಹಿಸಿದ್ದಾರೆ. ರಾಯಚೂರಿನ ಶಿರವಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಕ್ರವರ್ತಿ ಸೂಲಿಬೆಲೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.