ಬೆಂಗಳೂರು: ದಸರಾ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು, ನೈಋತ್ಯ ರೈಲ್ವೆಯು ಅಕ್ಟೋಬರ್ 10, 11 ಮತ್ತು 12, 2024 ರಂದು ಅರಸೀಕೆರೆ ಮತ್ತು ಮೈಸೂರು ನಿಲ್ದಾಣಗಳ ನಡುವೆ ಎರಡೂ ದಿಕ್ಕುಗಳಲ್ಲಿ ಮೂರು ಟ್ರಿಪ್ ಡೆಮು ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ವಿಶೇಷ ರೈಲು ಸೇವೆಯ ವಿವರಗಳು ಈ ಕೆಳಗಿನಂತಿವೆ.
ರೈಲು ಸಂಖ್ಯೆ 06207 ಅರಸೀಕೆರೆ-ಮೈಸೂರು ಡೆಮು ವಿಶೇಷ ರೈಲು ಅರಸೀಕೆರೆಯಿಂದ ಮಧ್ಯಾಹ್ನ 2.30ಕ್ಕೆ ಹೊರಟು, ಅದೇ ದಿನ ಸಂಜೆ 6.40ಕ್ಕೆ ಮೈಸೂರು ತಲುಪಲಿದೆ.
ರೈಲು ಸಂಖ್ಯೆ 06208 ಮೈಸೂರು-ಅರಸೀಕೆರೆ ಡೆಮು ವಿಶೇಷ ರೈಲು ಮೈಸೂರಿನಿಂದ ಸಂಜೆ 6.50ಕ್ಕೆ ಹೊರಟು, ಅದೇ ದಿನ ರಾತ್ರಿ 11.43ಕ್ಕೆ ಅರಸೀಕೆರೆ ತಲುಪಲಿದೆ.
ಈ ವಿಶೇಷ ರೈಲುಗಳು ಎರಡೂ ದಿಕ್ಕುಗಳಲ್ಲಿ ಹಬ್ಬನಘಟ್ಟ, ಬಾಗೇಶಪುರ, ಹಾಸನ, ಮಾವಿನಕೆರೆ, ಹೊಳೆ ನರಸೀಪುರ, ಅನ್ನೇಚಾಕನಹಳ್ಳಿ ಹಾಲ್ಟ್, ಶ್ರವಣೂರು ಹಾಲ್ಟ್, ಮಂದಗೆರೆ, ಬಿರಹಳ್ಳಿ ಹಾಲ್ಟ್, ಅಕ್ಕಿಹೆಬ್ಬಾಳು, ಹೊಸ ಅಗ್ರಹಾರ, ಅರ್ಜುನಹಳ್ಳಿ ಹಾಲ್ಟ್, ಹಂಪಾಪುರ, ಕೃಷ್ಣರಾಜನಗರ, ಡೋರನಹಳ್ಳಿ, ಸಾಗರಕಟ್ಟೆ, ಕಲ್ಲೂರು ಎಡಹಳ್ಳಿ ಹಾಲ್ಟ್, ಕೃಷ್ಣರಾಜಸಾಗರ, ಮತ್ತು ಬೆಳಗುಳ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿವೆ.
ಈ ವಿಶೇಷ ಡೆಮು ರೈಲುಗಳು 8 ಕಾರ ಡೆಮು ಬೋಗಿಗಳನ್ನು ಒಳಗೊಂಡಿರುತ್ತವೆ.
ಉಡುಪಿ:ಎಟಿಎಂ ಕಾರ್ಡ್ ಬದಲಾಯಿಸಿ ಲಕ್ಷಾಂತರ ರೂ. ವಂಚನೆ: ಪ್ರಕರಣ ದಾಖಲು