ಹುಬ್ಬಳ್ಳಿ : ರಾಜ್ಯದಲ್ಲಿ ಹವಾಮಾನ ವೈಪರಿತ್ಯದಿಂದ ಡೆಂಗ್ಯೂ, ಚಿಕನ್ ಗುನ್ಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ಹೆಚ್ಚಾಗಿದ್ದು, ಕಿಮ್ಸ್ನಲ್ಲಿ ತಪಾಸಣೆಗಾಗಿ ರೋಗಿಗಳು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ
ಅಯೋಧ್ಯೆ ರಾಮ ಮಂದಿರಕ್ಕೆ ಬೆಳ್ಳಿ ಇಟ್ಟಿಗೆ, ರೇಷ್ಮೆ ಸೀರೆ ಮತ್ತು ಶಲ್ಯ ಸಮರ್ಪಣೆ | Ayodhya Ram Mandir
ಗಾಳಿ ಮಳೆ, ಚಳಿ ವಾತಾವರಣ ಹೆಚ್ಚಾದ ಬೆನ್ನಲ್ಲೆ ದಿನದಿಂದ ದಿನಕ್ಕೆ ಹುಬ್ಬಳ್ಳಿ ಜಿಲ್ಲೆಯ ಜ್ವರದ ಜೊತೆಗೆ ನೆಗಡಿ, ಮೈಕೈ ನೋವು, ಎದೆ ನೋವು, ಸುಸ್ತಿನಿಂದ ನರಳುವವರ ಸಂಖ್ಯೆಯೂ ಹೆಚ್ಚಾಗಿದೆ. ಆರೋಗ್ಯ ಇಲಾಖೆಯೇ ನೀಡಿರುವ ಮಾಹಿತಿ ಅನ್ವಯ ಜಿಲ್ಲೆಯಲ್ಲಿ 2500ಕ್ಕೂ ಹೆಚ್ಚು ಜನರಲ್ಲಿ ಡೆಂಗ್ಯೂ ಲಕ್ಷಣಗಳು ಪತ್ತೆಯಾಗಿದೆ.
ಅಯೋಧ್ಯೆ ರಾಮ ಮಂದಿರಕ್ಕೆ ಬೆಳ್ಳಿ ಇಟ್ಟಿಗೆ, ರೇಷ್ಮೆ ಸೀರೆ ಮತ್ತು ಶಲ್ಯ ಸಮರ್ಪಣೆ | Ayodhya Ram Mandir
ಇನ್ನೂ ತಪಾಸಣೆಗೆ ಒಳಪಡಿಸಿದಾಗ 247 ಜನರಲ್ಲಿ ಡೆಂಗ್ಯೂ ದೃಢಪಟ್ಟಿದೆ. ಅದರಲ್ಲೂ ನವೆಂಬರ್ ತಿಂಗಳಲ್ಲಿಯೇ 12 ಜನರಲ್ಲಿ ಡೆಂಗ್ಯೂ ಪತ್ತೆಯಾಗಿದೆ.
ಅಯೋಧ್ಯೆ ರಾಮ ಮಂದಿರಕ್ಕೆ ಬೆಳ್ಳಿ ಇಟ್ಟಿಗೆ, ರೇಷ್ಮೆ ಸೀರೆ ಮತ್ತು ಶಲ್ಯ ಸಮರ್ಪಣೆ | Ayodhya Ram Mandir
ಚಿಕನ್ ಗುನ್ಯಾ ಗುಣಲಕ್ಷಣ ಕಂಡುಬಂದ 1051 ಜನರನ್ನು ತಪಾಸಣೆಗೆ ಒಳಪಡಿಸಲಾಗಿದ್ದು, ಈ ಪೈಕಿ 33 ಜನರಲ್ಲಿ ರೋಗ ದೃಢಪಟ್ಟಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹುಬ್ಬಳ್ಳಿ ಸುತ್ತಮುತ್ತ ಆರೋಗ್ಯಇಲಾಖೆ ಅಧಿಕಾರಿಗಳು ಎಚ್ಚರಿಕೆ ವಹಿಸುವಂತೆ ವಾರ್ನಿಂಗ್ ನೀಡಿದ್ದಾರೆ
ಅಯೋಧ್ಯೆ ರಾಮ ಮಂದಿರಕ್ಕೆ ಬೆಳ್ಳಿ ಇಟ್ಟಿಗೆ, ರೇಷ್ಮೆ ಸೀರೆ ಮತ್ತು ಶಲ್ಯ ಸಮರ್ಪಣೆ | Ayodhya Ram Mandir