ಬೆಂಗಳೂರು : ರಾಜ್ಯದಲ್ಲಿ ಡೆಂಗ್ಯೂ ಜ್ವರದ ಅಬ್ಬರ ಮುಂದುವರೆದಿದ್ದು, ಶನಿವಾರ ಒಂದೇ ದಿನ 175 ಮಂದಿಗೆ ಡೆಂಗ್ಯೂ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಶನಿವಾರ ಒಂದೇ ದಿನ ಬಿಬಿಎಂಪಿ ವ್ಯಾಪ್ತಿಯಲ್ಲಿ 115, ಮಂಡ್ಯ 26, ಗದಗ 8, ವಿಜಯಪುರ 9, ಉಡುಪಿ 2, ಉತ್ತರ ಕನ್ನಡ, ಬಳ್ಳಾರಿ ಜಿಲ್ಲೆಗಳಲ್ಲಿ ತಲಾ ಒಂದೊಂದು ಪ್ರಕರಣಗಳು ದಾಖಲಾಗಿವೆ. ಈ ಮೂಲಕ ಪ್ರಸಕ್ತ ವರ್ಷದಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ 7,000 ಗಡಿ ದಾಟಿದೆ. ಒಂದೇ ತಿಂಗಳಲ್ಲಿ ಆರು ಮಂದಿ ಬಲಿಯಾಗಿದ್ದಾರೆ.
ರಾಜ್ಯದಲ್ಲಿ ಈ ವರ್ಷ 93012 ಡೆಂಗೆ ಶಂಕಿತರನ್ನು ಗುರುತಿಸಿ, ತಪಾಸಣೆಗೆ ಒಳಪಡಿಸಲಾಗಿದೆ. 40918 ಮಂದಿಯ ರಕ್ತ ಪರೀಕ್ಷೆ ನಡೆಸಲಾಗಿದೆ. ಒಟ್ಟು 5,098 ಮಂದಿಗೆ ಡೆಂಗ್ಯೂ ದೃಪಟ್ಟಿದ್ದರೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 1,908 ಮಂದಿ ಸೇರಿ ಒಟ್ಟು 7006 ಮಂದಿಗೆ ಡೆಂಗ್ಯೂ ಜ್ವರ ಇರುವುದು ದೃಢಪಟ್ಟಿದೆ.