ಬೆಂಗಳೂರು: ರಾಜ್ಯಾಧ್ಯಂತ ಇಂದು ಡೆಂಗ್ಯೂ ಆರ್ಭಟಿಸಿದೆ. ಕಳೆದ 24 ಗಂಟೆಯಲ್ಲಿ 437 ಜನರಿಗೆ ಡೆಂಗ್ಯೂ ಪಾಸಿಟಿವ್ ಅಂತ ಪರೀಕ್ಷೆಯಲ್ಲಿ ದೃಢಪಟ್ಟಿದೆ.
ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಮಾಹಿತಿ ನೀಡಿದ್ದು, ಕಳೆದ 24 ಗಂಟೆಯಲ್ಲಿ 2704 ಜನರನ್ನು ಡೆಂಗ್ಯೂ ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ 437 ಮಂದಿಗೆ ಡೆಂಗ್ಯೂ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಸೋಂಕಿತರ ಸಂಖ್ಯೆ 8,658ಕ್ಕೆ ಏರಿಕೆಯಾಗಿದೆ ಅಂತ ತಿಳಿಸಿದೆ.
ಇಂದು 1 ವರ್ಷದೊಳಗಿನ 7 ಮಕ್ಕಳಿಗೆ, 18 ವರ್ಷದೊಳಗಿನ 154 ಮಕ್ಕಳಿಗೆ, 18 ವರ್ಷ ಮೇಲ್ಪಟ್ಟ 276 ಸೇರಿದಂತೆ 437 ಜನರಿಗೆ ಡೆಂಗ್ಯೂ ಪತ್ತೆಯಾಗಿದೆ ಎಂದು ಮಾಹಿತಿ ನೀಡಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ 165, ಬೆಂಗಳೂರು ನಗರದಲ್ಲಿ 10, ಬೆಂಗಳೂರು ಗ್ರಾಮಾಂತರ 5, ರಾಮನಗರ 14, ಕೋಲಾರ 19, ಚಿಕ್ಕಬಳ್ಳಾಪುರ 7, ತಮಕೂರು 5, ಚಿತ್ರದುರ್ಗ 3, ದಾವಣಗೆರೆ 24, ಬೆಳಗಾವಿ 32, ಗದಗ 15, ಉತ್ತರ ಕನ್ನಡ 01, ಕಲಬುರ್ಗಿ 20 ಜನರಿಗೆ ಡೆಂಗ್ಯೂ ಪಾಸಿಟಿವ್ ಅಂತ ದೃಢಪಟ್ಟಿದೆ ಎಂದಿದೆ.
ಬೀದರ್ 10, ಬಳ್ಳಾರಿ 4, ವಿಜಯನಗರ 1, ಕೊಪ್ಪಳ 3, ಮೈಸೂರು 17, ಮಂಡ್ಯ 47, ಹಾಸನ 6, ಉಡುಪಿ ಹಾಗೂ ಚಿಕ್ಕಮಗಳೂರು 10, ಕೊಡಗು 9 ಸೇರಿದಂತೆ 437 ಜನರಿಗೆ ಡೆಂಗ್ಯೂ ಪಾಸಿಟಿವ್ ಎಂಬುದಾಗಿ ಪರೀಕ್ಷೆಯಿಂದ ತಿಳಿದು ಬಂದಿದೆ.
ದೇಶಾದ್ಯಂತ ‘HMT’ ಭೂಮಿ ಒತ್ತುವರಿ ತೆರವಿಗೆ ಕ್ರಮ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
ದೇಶಾದ್ಯಂತ ‘HMT’ ಭೂಮಿ ಒತ್ತುವರಿ ತೆರವಿಗೆ ಕ್ರಮ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ