ಬೆಂಗಳೂರು: ರಾಜ್ಯದಲ್ಲಿ ಡೆಂಘಿ ಅಬ್ಬರ ಮುಂದುವರೆದಿದ್ದು, ದಿನದಿಂದ ದಿನಕ್ಕೆ ಡೆಂಘಿ ಪ್ರಕರಣಗಳು ಹೆಚ್ಚುತ್ತಿವೆ. ಇದೀಗ ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 443 ಹೊಸ ಡೆಂಘಿ ಪ್ರಕರಣಗಳು ದೃಢವಾಗಿವೆ.
ಪ್ರಕರಣಗಳು ದಾಖಲಾಗಿರುವ ಕುರಿತಂತೆ ವರದಿಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 3,303 ತಲುಪಿದ್ದು, ಒಟ್ಟು ಸೋಂಕಿತರ ಸಂಖ್ಯೆ 15,544ಕ್ಕೆ ಏರಿಕೆಯಾಗಿದೆ. ಸೋಂಕಿತರಲ್ಲಿ ಈವರೆಗೂ ಹತ್ತು ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಕಳೆದ 24 ಗಂಟೆಗಳಲ್ಲಿ 3,523 ಶಂಕಿತರನ್ನು ಡೆಂಘ ಪರೀಕ್ಷೆಗೆ ಒಳಪಡಿಸಲಾಗಿದ್ದು, ಬೆಂಗಳೂರಿನಲ್ಲಿ 203, ಹಾಸನ 33, ಮಂಡ್ಯ 22, ಚಿತ್ರದುರ್ಗ 21, ಬೆಳಗಾವಿ 20 ಸೇರಿ 443 ಮಂದಿ ಡೆಂಘ ಪೀಡಿತರಾಗಿದ್ದಾರೆ. ಡೆಂಘ ಜ್ವರದಿಂದ ಬಳಲುತ್ತಿರುವವರಲ್ಲಿ 2,655 ಮಂದಿ ಮನೆ ಆರೈಕೆಯಲ್ಲಿದ್ದು, 648 ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿದ್ದು, ಇವರಲ್ಲಿ 15 ಮಂದಿಯ ಸ್ಥಿತಿ ಗಂಭೀರವಾಗಿದ್ದು, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.