ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಘಿ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಇದೀಗ ರಾಜ್ಯದಲ್ಲಿ ನಿನ್ನೆ ಒಂದೇ ದಿನ 469 ಪ್ರಕರಣಗಳು ದಾಖಲಾಗಿದ್ದು, ಬೆಂಗಳೂರಲ್ಲಿ 292 ಕೇಸ್ ಗಳು ದಾಖಲಾಗಿವೆ.
ಇದುವರೆಗೂ ರಾಜ್ಯದಲ್ಲಿ ಡೆಂಘಿಗೆ 10 ಜನರು ಸಾವನ್ನಪ್ಪಿದ್ದರೆ. ಹಾಗಾಗಿ ರಾಜ್ಯದಲ್ಲಿ ಇವರೆಗೆ ಡೆಂಘಿ ಪ್ರಕರಣಗಳ ಸಂಖ್ಯೆ ಒಟ್ಟು 14,223ಕ್ಕೆ ಏರಿಕೆಯಾಗಿವೆ ಎಂದು ಆರೋಗ್ಯ ಇಲಾಖೆ ವರದಿಯಲ್ಲಿ ತಿಳಿಸಿದೆ.
ಅಲ್ಲದೆ ಇತ್ತೀಚಿಗೆ ಬೆಂಗಳೂರಿನ ಜನತೆಗೆ ಆರೋಗ್ಯ ಇಲಾಖೆಯು ಡೆಂಘಿ ರೋಗಕ್ಕೆ ಉಚಿತ ಸಹಾಯವಾಣಿ ಆರಂಭಿಸಿದ್ದು, ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಟೋಲ್ ಫ್ರೀ ಸಂಖ್ಯೆ 1800-425-8330 ಆರಂಭಿಸಿದ್ದು, ಹೆಚ್ಚಿನ ಮಾಹಿತಿಗಾಗಿ ಈ ನಂಬರ್ ಗೆ ಕರೆ ಮಾಡಿ ಸೂಕ್ತ ಮಾಹಿತಿ ಪಡೆದುಕೊಳ್ಳಬಹುದಾಗಿದೆ.