ಬೆಂಗಳೂರು : ರಾಜ್ಯದಲ್ಲಿ ದಿನೇ ದಿನೇ ಡೆಂಘಿ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಇದೀಗ ರಾಜ್ಯದಲ್ಲಿ ಕಳೆದ ನಿನ್ನೆ ಒಂದೇ ದಿನ 381 ಹೊಸ ಪ್ರಕಾರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದಲ್ಲಿ ಕಳೆದ ನಿನ್ನೆ ಒಂದೇ ದಿನ 381 ಹೊಸ ಪ್ರಕಾರಣಗಳು ಪತ್ತೆಯಾಗಿವೆ ಪ್ರಸ್ತುತ ರಾಜ್ಯದಲ್ಲಿ ಇಲ್ಲಿಯವರೆಗೆ 8221 ಪ್ರಕರಣಗಳು ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ವರದಿಯಲ್ಲಿ ಬಹಿರಂಗವಾಗಿದೆ.
ಅಲ್ಲದೆ ರಾಜ್ಯದ ಗಡಿ ಭಾಗದಲ್ಲಿ ಕೂಡ ಡೆಂಘಿ ಪ್ರಕರಣಗಳು ಹೆಚ್ಚಿದ್ದು, ಬೀದರ್ ಜಿಲ್ಲೆಯಲ್ಲಿ ಕಳೆದ 2 ದಿನಗಳಲ್ಲಿ 6 ಡೆಂಘಿ ಪ್ರಕರಣಗಳು ಪತ್ತೆಯಾಗಿವೆ. ಆದ್ದರಿಂದ ದಿನದಿಂದ ದಿನಕ್ಕೆ ರಾಜ್ಯದಲ್ಲಿ ಡೆಂಘಿ ಪ್ರಕರಣಗಳು ಹೆಚ್ಚುತ್ತಿದ್ದು, ಆರೋಗ್ಯ ಇಲಾಖೆ ಸೋಂಕು ತಡೆಗಟ್ಟಲು ಅಗತ್ಯ ಕ್ರಮಗಳನ್ನು ಕೈಗೊಂಡಿದೆ.