ಬೆಂಗಳೂರು : ರಾಜ್ಯದಲ್ಲಿ ಡೆಂಗ್ಯೂ ಜ್ವರದ ಅಬ್ಬರ ಮುಂದುವರೆದಿದ್ದು, ನಿನ್ನೆ ಒಂದೇ ದಿನ 549 ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಸೋಂಕಿತರ ಸಂಖ್ಯೆ 13,268ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಡೆಂಗ್ಯೂ ಜ್ವರಕ್ಕೆ ಮತ್ತೆ ಇಬ್ಬರು ಬಲಿಯಾಗಿದ್ದು, ಒಟ್ಟು ಮೃತರ ಸಂಖ್ಯೆ 10ಕ್ಕೆ ಕ್ಕೆ ಏರಿಕೆಯಾಗಿದೆ. ಸರಕಾರಿ ಆಸ್ಪತ್ರೆಗಳಲ್ಲಿ ಸೊಳ್ಳೆ ಗಳಿಂದ ಹರಡುವ ಕಾಯಿಲೆಯ ಪರಿಣಾಮಕಾರಿ ನಿರ್ವಹಣೆಗಾಗಿ ನೋಡಲ್ ಅಧಿಕಾರಿಗಳನ್ನು ನೇಮಿಸಿದೆ.
ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಎಕ್ಸ್ ಮಾಡಿ ಮಾಹಿತಿ ಹಂಚಿಕೊಂಡಿದ್ದು, ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗೆಳಲ್ಲಿ ಡೆಂಗ್ಯೂ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಚಿಕಿತ್ಸೆಯ ಬಗ್ಗೆ ಗಮನ ಹರಿಸೋದಕ್ಕಾಗಿ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ ಅಂತ ತಿಳಿಸಿದೆ.
ಬೆಂಗಳೂರಲ್ಲಿ ಡೆಂಗ್ಯೂ ರೋಗಿಗಳ ಚಿಕಿತ್ಸೆಗಾಗಿ ಕೆಸಿ ಜನರಲ್ ಆಸ್ಪತ್ರೆಗೆ ಡಾ.ಸುರೇಶ್-9986121101, ಸಿವಿ ರಾಮನ್ ಜನರಲ್ ಆಸ್ಪತ್ರೆಗೆ ಡಾ.ಕವಿತ ಗೌತಮ್ -9008594651, ಜಯನಗರ ಜನರಲ್ ಆಸ್ಪತ್ರೆಗೆ ಡಾ.ದೇವೇಂದ್ರಪ್ಪ ಕೆ ಆರ್-9880571367, ಯಲಹಂಕ ಜನರಲ್ ಆಸ್ಪತ್ರೆಗೆ ಡಾ.ಗಣೇಶ್ -9980025323, ಕೆ ಆರ್ ಪುರಂ ಜನರಲ್ ಆಸ್ಪತ್ರೆಗೆ ಡಾ.ಅಶೋಕ್ ರೆಡ್ಡಿ -7022329578 ಹಾಗೂ ವಾಣಿವಿಲಾಸ ಆಸ್ಪತ್ರೆಗೆ ಡಾ.ರವಿಶಂಕರ್ -9449487592 ಅವರನ್ನು ನೋಡಲ್ ಆಧಿಕಾರಿಯಾಗಿ ನೇಮಕ ಮಾಡಿದೆ.