ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು ಈಗಾಗಲೇ ಡೆಂಗ್ಯೂ ರೋಗವನ್ನು ತಡೆಗಟ್ಟಲು ಆರೋಗ್ಯ ಇಲಾಖೆ ಹಲವು ಕ್ರಮ ಕೈಗೊಂಡಿದೆ. ಆದರೆ ಇದೀಗ ಡೆಂಘಿ ಜ್ವರಕ್ಕೆ ಚಿಕಿತ್ಸೆ ಲಭ್ಯವಾಗುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯಿಂದ ಉಚಿತ ಸಹಾಯವಾಣಿ ಆರಂಭಿಸಲಾಗಿದೆ.
ಹೌದು ಈ ವರ್ಷ ರಾಜ್ಯದಲ್ಲಿ ಉತ್ತಮವಾಗಿ ಮಳೆ ಆಗುತ್ತಿದ್ದು, ಎಲ್ಲೆಡೆ ನೀರು ನಿಂತುಕೊಂಡು ಅಪಾಯಕಾರಿ ಸೊಳ್ಳೆಗಳ ಸಂತಾನೋತ್ಪತ್ತಿ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಡೆಂಘೀ ಜ್ವರದ ಪ್ರಕರಣಗಳು 11 ಸಾವಿರಕ್ಕಿಂತ ಹೆಚ್ಚಾಗಿದ್ದು, 8 ಜನರು ಸಾವನ್ನಪ್ಪಿದ್ದಾರೆ. ಹಾಗಾಗಿ ಆರೋಗ್ಯ ಇಲಾಖೆಯು ಡೆಂಗ್ಯೂ ಚಿಕಿತ್ಸೆಗೆ ಇದೀಗ ಉಚಿತವಾಗಿ ಸಹಾಯವಾಣಿ ಆರಂಭಿಸಿದೆ.
ವಿಧಾನ ಮಂಡಲ ಅಧಿವೇಶನದಲ್ಲಿ ವಿಪಕ್ಷಗಳಿಂದ ತೀವ್ರ ಟೀಕೆಯನ್ನು ಎದುರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಕೊಳೆಗೇರಿ ಪ್ರದೇಶಗಳು ಸೇರಿದಂತೆ ಕೆಲವೆಡೆ ನಮ್ಮ ಕ್ಲಿನಿಕ್‌ಗಳನ್ನು ಆರಂಭಿಸಲಾಗಿದೆ. ಆದರೆ, ಇನ್ನೂ ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ಕೆಸಿ ಜನರಲ್ ಆಸ್ಪತ್ರೆ, ಸಿವಿ ರಾಮನ್ ಆಸ್ಪತ್ರೆ, ಜಯನಗರ ಆಸ್ಪತ್ರೆ,ಕೆಆರ್ ಪುರಂ ಜನರಲ್ ಆಸ್ಪತ್ರೆ ಹಾಗೂ ವಾಣಿವಿಲಾಸ ಆಸ್ಪತ್ರೆಗಳಿಗೆ ನೋಡಲ್ ಅಧಿಕಾರಿಗಳ ನೇಮಕ ಮಾಡಲಾಗಿದೆ. ಜೊತೆಗೆ, ಡೆಂಘೀ ಜ್ವರಕ್ಕೆ ಚಿಕಿತ್ಸೆ ಪಡೆಯಲು ಅನುಕೂಲ ಆಗುವಂತೆ ಉಚಿತ ಸಹಾಯವಾಣಿ 1800 425 8330 ಸಂಖ್ಯೆಯನ್ನು ಆರಂಭಿಸಲಾಗಿದೆ.
ಇನ್ನು ಬೆಂಗಳೂರಿನಲ್ಲಿ ಡೆಂಘೀ ಜ್ವರದ ಲಕ್ಷ ಗಳು ಕಂಡುಬಂದಲ್ಲಿ ಹಾಗೂ ಡೆಂಘೀ ಜ್ವರಕ್ಕೆ ಸೂಕ್ತ ಚಿಕಿತ್ಸೆ ಸಿಗದೇ ಹೋದಲ್ಲಿ ಜನರು ಅಥವಾ ರೋಗಿಗಳು ಆರೋಗ್ಯ ಇಲಾಖೆ ನೀಡಿರುವ ಉಚಿತ ಸಹಾಯವಾಣಿ ಸಂಖ್ಯೆ 1800 425 8330 ಗೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದು. ಜೊತೆಗೆ, ಸಹಾಯವಾಣಿ ಸಂಖ್ಯೆಯಲ್ಲಿ ತಿಳಿಸಲಾಗುವ ಮಾರ್ಗಸೂಚಿಗಳನ್ನು ಅನುಸರಿಸಿ ಸಂಬಂಧಪಟ್ಟ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದುಕೊಳ್ಳುವ ಮೂಲಕ ಡೆಂಘೀ ಜ್ವರಿದಂದ ಜೀವಹಾನಿ ಆಗುವುದನ್ನು ತಪ್ಪಿಸಿಕೊಳ್ಳಬಹುದು.
Nodal Officers have been appointed for #Dengue Treatment in all govt hospitals across #Bengaluru. These dedicated officers will ensure better patient care, quicker response times, & effective management of dengue cases.
Toll-free Helpline No: 1800-425-8330
Let's #DefeatDengue! pic.twitter.com/9H7Hi0StiM
— K'taka Health Dept (@DHFWKA) July 19, 2024