ಬೆಂಗಳೂರು: ನಗರದಲ್ಲಿ ದಿನೇ ದಿನೇ ಡೆಂಗ್ಯೂ ಆರ್ಭಟಿಸುತ್ತಿದೆ. ಕೋವಿಡ್ ನಂತ್ರ ವ್ಯಾಪಕವಾಗಿ ಹೆಚ್ಚಾಗುತ್ತಿರುವಂತ ಡೆಂಗ್ಯೂ ಪೀಡಿತರಿಗೆ ಚಿಕಿತ್ಸೆಗಾಗಿ ಬೆಂಗಳೂರಿನ ಐದು ಸರ್ಕಾರಿ ಆಸ್ಪತ್ರೆಗಳಲ್ಲಿ ಬೆಡ್ ಮೀಸಲಿರಿಸಲಾಗಿದೆ.
ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಮೀಷನರ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. ಅದರಲ್ಲಿ ನಗರದಲ್ಲಿ ಡೆಂಗ್ಯೂ ಪೀಡಿತರ ಸಂಖ್ಯೆ ಹೆಚ್ಚಾಗುತ್ತಿದೆ. ಡೆಂಗ್ಯೂ ನಿಯಂತ್ರಣಕ್ಕೂ ಸೂಕ್ತ ಕ್ರಮ ವಹಿಸಲಾಗಿದೆ ಅಂತ ಹೇಳಿದ್ದಾರೆ.
ಬೆಂಗಳೂರಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡುವುದಕ್ಕಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ ಬೆಡ್ ಮೀಸಲು ಇರಿಸುವಂತ ಕ್ರಮ ವಹಿಸಲಾಗಿದೆ. ಅದರಂತೆ ಕೆಸಿ ಜನರಲ್ ಆಸ್ಪತ್ರೆಯಲ್ಲಿ 25 ಬೆಡ್, ಸಿವಿ ರಾಮನ್ ಆಸ್ಪತ್ರೆಯಲ್ಲಿ 25, ಜಯನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ 25 ಬೆಡ್, ಯಲಹಂಕದ ತಾಲ್ಲೂಕು ಆಸ್ಪತ್ರೆಯಲ್ಲಿ 10 ಹಾಗೂ ಕೆ ಆರ್ ಪುರಂನ ತಾಲ್ಲೂಕು ಆಸ್ಪತ್ರೆಯಲ್ಲಿ 10 ಬೆಡ್ ಮೀಸಲಿರಿಸಲಾಗಿದೆ ಅಂತ ತಿಳಿಸಿದ್ದಾರೆ.
To ensure effective management of moderate and severe cases of #Dengue, a specific number of beds will be reserved in key government hospitals in Bengaluru.
If you experience dengue symptoms, seek medical help immediately. Let's work together to #DefeatDengue! pic.twitter.com/KjJuUkAUSq
— K'taka Health Dept (@DHFWKA) July 17, 2024
BIG NEWS : 2026 ನೇ ಸಾಲಿನಿಂದ ವರ್ಷಕ್ಕೆ ಎರಡು ಬಾರಿ ʻCBSEʼ ಬೋರ್ಡ್ ಪರೀಕ್ಷೆ ಜಾರಿ : ʻNCFSEʼ ಶಿಫಾರಸು