ಬೆಂಗಳೂರು: ಅಕ್ರಮ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಬಿ.ಎಸ್ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ.
ಬಿಜೆಪಿ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಸಚಿವ ಮುರುಗೇಶ್ ನಿರಾಣಿ ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣವನ್ನು ತಕ್ಷಣ ವಿಚಾರಣೆಗೆ ಕೈಗೆತ್ತಿಕೊಳ್ಳಲು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ನಿರಾಕರಿಸಿದರು.
ಅಕ್ರಮ ಡಿನೋಟಿಫಿಕೇಶನ್ ಪ್ರಕರಣ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಎಫ್ ಐ ಆರ್ ರದ್ದುಪಡಿಸುವಂತೆ ಸುಪ್ರೀಂ ಕೋರ್ಟ್ ಗೆ ಯಡಿಯೂರಪ್ಪಅರ್ಜಿ ಸಲ್ಲಿಸಿದ್ದರು. ಆದರೆ ಸುಪ್ರೀಂಕೋರ್ಟ್ ಈ ಬಗ್ಗೆ ನಾವು ವಿಚಾರಣೆ ನಡೆಸುವುದಿಲ್ಲ ಎಂದು ಅರ್ಜಿ ತಿರಸ್ಕರಿಸಿದೆ. ವಿಚಾರಣೆಗೆ ಸುಪ್ರೀಂಕೋರ್ಟ್ ನ ಸಿಜೆಐ ಯು.ಯು ಲಲಿತ್ ನಿರಾಕರಿಸಿದ್ದಾರೆ, ದೀಪಾವಳಿ ನಂತರ ಅರ್ಜಿ ವಿಚಾರಣೆ ನಡೆಸುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ. ಹತ್ತು ವರ್ಷಗಳ ಹಿಂದಿನ ಅಕ್ರಮ ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ.ಎಸ್ ಯಡಿಯೂರಪ್ಪ ಹಾಗೂ ಮುರುಗೇಶ್ ನಿರಾಣಿ, ಇತರರ ವಿರುದ್ಧ ಪ್ರಕರಣ ದಾಖಲಾಗಿತ್ತು, ಮುಂದಿನ ತಿಂಗಳು ಮುಖ್ಯ ನ್ಯಾಯಮೂರ್ತಿಗಳು ನಿವೃತ್ತರಾಗುತ್ತಿರುವ ಹಿನ್ನೆಲೆಯಲ್ಲಿ ತಮ್ಮ ಹೊರತಾದ ಮತ್ತೊಂದು ಪೀಠದಲ್ಲಿ ವಿಚಾರಣೆ ನಡೆಸಲು ಪಟ್ಟಿ ಮಾಡುವಂತೆ ಸೂಚಿಸಿದರು. ದೀಪಾವಳಿಯ ನಂತರ ಬೇರೊಂದು ಪೀಠದಲ್ಲಿ ಅರ್ಜಿಯ ವಿಚಾರಣೆ ಆರಂಭವಾಗಲಿದೆ.
ಇತ್ತೀಚೆಗೆ ಮಾಹಿತಿ ತಂತ್ರಜ್ಞಾನ ಕಾರಿಡಾರ್ ನಿರ್ಮಾಣಕ್ಕಾಗಿ ಮಾಡಿದ್ದ ಭೂಮಿ ಅಕ್ರಮ ಡಿನೋಟಿಫಿಕೇಶನ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು, ಏಪ್ರಿಲ್ 19ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿತ್ತು.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಬಿ.ಜಯಂತ್ ಕುಮಾರ್, ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಸೆಕ್ಷನ್ 13 (1) (ಡಿ) ಮತ್ತು 13 (2)ರ ಅಡಿಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಿ, ಸಮನ್ಸ್ ಜಾರಿ ಮಾಡಲು ಆದೇಶ ಹೊರಡಿಸಿದ್ದರು
ದೇವನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ 26 ಎಕರೆ ಡಿನೋಟಿಫೈ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಅಲಂ ಪಾಷಾ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಇನ್ನೂ, ಬೆಂಗಳೂರಿನ ಕೊನದಾಸಪುರದಲ್ಲಿ ಬಿಡಿಎ ಫ್ಲಾಟ್ ನಿರ್ಮಾಣದಲ್ಲಿ ಅಕ್ರಮ ನಡೆದಿರುವ ಆರೋಪಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ವಿರುದ್ಧದ ತನಿಖೆಗೆ ಸುಪ್ರೀಂಕೋರ್ಟ್ ಮಧ್ಯಂತರ ತಡೆ ನೀಡಿದೆ. ಯಡಿಯೂರಪ್ಪ ಜನಪ್ರತಿನಿಧಿಯಾಗಿರುವ ಹಿನ್ನೆಲೆಯಲ್ಲಿ ತನಿಖೆಗೆ ತಡೆ ನೀಡಬೇಕು. ತನಿಖೆಗೆ ರಾಜ್ಯಪಾಲರ ಪೂರ್ವಾನುಮತಿ ಅಗತ್ಯ ಎಂದು ಬಿಎಸ್ವೈ ಪರ ವಕೀಲರು ಇಂದು ಸುಪ್ರೀಂಕೋರ್ಟ್ನಲ್ಲಿ ವಾದಿಸಿದ್ದರು.
BIGG NEWS: ಶಾಲೆಗಳಿಗೆ ದಸರಾ ರಜೆಯನ್ನು1 ತಿಂಗಳಿಗೆ ವಿಸ್ತರಿಸಿ; ಸರ್ಕಾರಕ್ಕೆ ಬಸವರಾಜ ಹೊರಟ್ಟಿ ಪತ್ರ