ಬೆಂಗಳೂರು: ಪ್ರಸ್ತಕ ಸಾಲಿಗೆ ಮಿಲಿಟರಿ ಪಿಂಚಣಿ ರಹಿತ ಕರ್ನಾಟಕದ ಮಾಜಿ ಸೈನಿಕರ ಹಾಗೂ ಕರ್ನಾಟಕದಲ್ಲಿ ನೆಲೆಸಿರುವ ಹೊರರಾಜ್ಯದ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳಿಗೆ ಕಲ್ಯಾಣ ನಿಧಿ ಮತ್ತು ವಿಶೇಷ ನಿಧಿಗಳಿಂದ ಶಿಷ್ಯವೇತನ ಮಂಜೂರು ಮಾಡಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ಶಾಲಾ ಮತ್ತು ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಿಲಿಟರಿ ಪಿಂಚಣಿ ರಹಿತ ಕರ್ನಾಟಕದ ಮಾಜಿ ಸೈನಿಕರ ಹಾಗೂ ಕರ್ನಾಟಕದಲ್ಲಿ ನೆಲೆಸಿರುವ ಹೊರರಾಜ್ಯದ ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನ ನೀಡಲು ಉದ್ದೇಶಿಸಲಾಗಿದೆ.
ಕಲ್ಯಾಣ ನಿಧಿಯಿಂದ ಒಂದನೇ ತರಗತಿಯಿಂದ ಪಿಯುಸಿ ಎರಡನೇ ವರ್ಷದವರೆಗೆ ಓದುವ ಮಕ್ಕಳಿಗೆ (ಅಧಿಕಾರಿಗಳನ್ನು ಹೊರತುಪಡಿಸಿ) ಪುಸ್ತಕ ಅನುದಾನವನ್ನು ಮತ್ತು ವಿಶೇಷ ನಿಧಿಯಿಂದ ಡಿಗ್ರಿ, ಡಿಪ್ಲೋಮಾ ಜೆಓಸಿ ಹಾಗೂ ಪ್ರೋಫೆಷನಲ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ (ಅಧಿಕಾರಿಗಳನ್ನು ಹೊರತುಪಡಿಸಿ) ಮಕ್ಕಳು ಅರ್ಹರಾಗಿರುತ್ತಾರೆ. ಶುಲ್ಕ ರಹಿತ ಅರ್ಜಿಗಳನ್ನು ಧಾರವಾಡದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಕಚೇರಿಯಿಂದ ಪಡೆದು ಭರ್ತಿ ಮಾಡಿ ಅಕ್ಟೋಬರ್ 30 ರೊಳಗಾಗಿ ಇದೇ ಕಚೇರಿಗೆ ಸಲ್ಲಿಸಬೇಕು.ಹೆಚ್ಚಿನ ಮಾಹಿತಿಗಾಗಿ ದೂ.0836-2440176 ಗೆ ಸಂಪರ್ಕಿಸಬಹುದು ಎಂದು ಧಾರವಾಡ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.