ಧಾರವಾಡ: ಸಮಾಜ ಕಲ್ಯಾಣ ಇಲಾಖೆಯು 2023-24 ನೇ ಸಾಲಿನಲ್ಲಿ ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯದವರೆಗೆ ಹಾಗೂ ಅರಣ್ಯ ಆಧಾರಿತ ಆದಿವಾಸಿ ಸಮುದಾಯದ ವಿದ್ಯಾವಂತ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗೆ ಜಿಲ್ಲಾ ಮಟ್ಟದಲ್ಲಿ ಬೆಂಗಳೂರಿನ ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ ಹಾಗೂ ಪ್ರಾದೇಶಿಕ ತರಬೇತಿ ಕೇಂದ್ರಗಳ ಸಹಯೊಗದಲ್ಲಿ 60 ದಿನಗಳ ವಿವಿಧ ಕೌಶಲ್ಯಾಭಿವೃದ್ಧಿ (ತಾಂತ್ರಿಕ ನೈಪುಣ್ಯತೆ) ತರಬೇತಿಗಾಗಿ ಅರ್ಜಿಯನ್ನು ಆಹ್ವಾನಿಸಿದೆ.
ಆಸಕ್ತರು, ನಿಗದಿತ ನಮೂನೆ ಅರ್ಜಿಯನ್ನು ಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಧಾರವಾಡ ಅಥವಾ ಆಯಾ ತಾಲ್ಲೂಕಿನ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಧಾರವಾಡ, ಹುಬ್ಬಳ್ಳಿ, ಕಲಘಟಗಿ, ಕುಂದಗೋಳ ಹಾಗೂ ನವಲಗುಂದ ತಾಲ್ಲೂಕಾ ಕಾರ್ಯಾಲಯ ಮೂಲಕ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲೆಗಳೊಂದಿಗೆ ಜೂನ್ 30, 2024 ರೊಳಗಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0836-2447201 ಗೆ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
BREAKING: ‘ಚೆಂದನ್ ಶೆಟ್ಟಿ-ನಿವೇದಿತಾ’ಗೆ ‘ವಿಚ್ಚೇದನ’ ಮಂಜೂರು: 4 ವರ್ಷಗಳ ‘ದಾಂಪತ್ಯ ಜೀವನ’ ಅಂತ್ಯ