ಬೆಂಗಳೂರು: ಕಾನನ ಪ್ರದೇಶದೊಳಗೆ ಸಾಗುವ ರಸ್ತೆಗಳಲ್ಲಿ ಅರಣ್ಯ ಇಲಾಖೆಯ ಗಸ್ತು ವಾಹನ ನಿಯೋಜನೆ ಮಾಡಲಾಗುತ್ತದೆ ಎಂಬುದಾಗಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಇಂದು ಟಿಪ್ಪಣಿ ಹೊರಡಿಸಿರುವಂತ ಅವರು, ಚಾಮರಾಜನಗರ ಜಿಲ್ಲೆ ಬಂಡೀಪುರದ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ವಾಹನದಿಂದ ಇಳಿದು ಫೋಟೋ ತೆಗೆಯುತ್ತಿದ್ದ ವ್ಯಕ್ತಿಯ ಮೇಲೆ ನಿನ್ನ ಕಾಡಾನೆಯೊಂದು ದಾಳಿ ಮಾಡಿರುವ ವಿಡಿಯೋ ತುಣುಕು ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ ಎಂದಿದ್ದಾರೆ.
ಕಾಡಿನೊಳಗೆ ಸಾಗುವ ರಸ್ತೆಯಲ್ಲಿ ಪ್ರಯಾಣಿಕರು ವಾಹನದಿಂದ ಇಳಿಯದಂತೆ ಜಾಗೃತಿ ಮೂಡಿಸಲು ಮತ್ತು ಈ ರೀತಿ ಕಾಡು ಹಾದಿಯಲ್ಲಿ ಇಳಿಯುವವರ ವಿರುದ್ಧ ಕ್ರಮ ಕೈಗೊಳ್ಳಲು ಈ ಹಿಂದೆ ಹಲವು ಬಾರಿ ಸೂಚಿಸಲಾಗಿದೆ. ಆದಾಗ್ಯೂ ಇಂತಹ ಘಟನೆ ಪದೇ ಪದೇ ಮರುಕಳಿಸುತ್ತಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ತಿಳಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿಗಳಲ್ಲಿ ಗಸ್ತು ವಾಹನ ಸಂಚರಿಸುವ ರೀತಿಯಲ್ಲೇ, ಕಾನನ ಪ್ರದೇಶದೊಳಗೆ ಸಾಗುವ ರಸ್ತೆಗಳಲ್ಲಿ ಅರಣ್ಯ ಇಲಾಖೆಯ ಗಸ್ತು ವಾಹನ ನಿಯೋಜಿಸಿ, ಕಾನೂನು, ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮತ್ತು ವನ್ಯಜೀವಿಗಳಿಗೆ ಆಹಾರ ನೀಡದಂತೆ, ವಾಹನದಿಂದ ಇಳಿಯದಂತೆ, ವೇಗವಾಗಿ ಮತ್ತು ಅಜಾಗರೂಕತೆಯಿಂದ ವಾಹನ ಓಡಿಸದಂತೆ ಕ್ರಮ ವಹಿಸಲು ಸೂಚಿಸಿದ್ದಾರೆ.
ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾಗಿ ‘MLC ದಿನೇಶ್ ಗೂಳಿಗೌಡ’ ನೇಮಕ
ಸಾಗರದಲ್ಲಿ ಧರ್ಮಸ್ಥಳ ಕ್ಷೇತ್ರದ ಗೌರವ, ಘನತೆ ಕುಗ್ಗಿಸುವವರ ವಿರುದ್ಧ ಸೂಕ್ತ ಕ್ರಮಕ್ಕೆ ನಾಗರೀಕ ಸಮಿತಿ ಒತ್ತಾಯ