ಬೆಂಗಳೂರು: ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಗುಂಡೇಟಿನಿಂದ ಗಾಯಗೊಂಡು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ದೂರವಾಣಿ ಕರೆ ಮಾಡಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಆರೋಗ್ಯ ವಿಚಾರಿಸಿದರು.
ಮಾಜಿ ಭೂಗತ ದೊರೆ ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ನಡೆಸಲಾಗಿತ್ತು. ಈ ದಾಳಿಯಲ್ಲಿ ಗುಂಡು ತಗುಲಿ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಗಾಯಗೊಂಡಿದ್ದರು. ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂತಹ ಅವರಿಗೆ ಕರೆ ಮಾಡಿದಂತ ಡಿಸಿಎಂ ಡಿಕೆ ಶಿವಕುಮಾರ್, ಆರೋಗ್ಯ ವಿಚಾರಿಸಿದರು.
ಇನ್ನೂ ಘಟನೆ ಹೇಗೆ ಆಯ್ತು? ಎನ್ನುವ ಬಗ್ಗೆಯೂ ಮಾಹಿತಿ ಪಡೆದಿದ್ದಾರೆ ಎನ್ನಲಾಗಿದೆ. ಇದಲ್ಲದೇ ಈ ಪ್ರಕರಣ ಸಂಬಂಧ ಆರೋಪಿಗಳು ಯಾರೇ ಆಗಿದ್ದರೂ ಪೊಲೀಸರು ಪತ್ತೆ ಹಚ್ಚುತ್ತಾರೆ. ನಾನು ಗೃಹ ಸಚಿವ ಡಾ.ಜಿ ಪರಮೇಶ್ವರ್ ಜೊತೆಗೆ ಮಾತನಾಡುತ್ತೇನೆ. ಶೀಘ್ರವೇ ಆರೋಪಿಗಳನ್ನು ಪತ್ತೆ ಮಾಡಿ, ಬಂಧಿಸುವಂತ ಭರವಸೆಯನ್ನು ನೀಡಿದ್ದಾರೆ ಎನ್ನಲಾಗಿದೆ.
ಸುಚಿವ್ರತ್ ಗೆ ಬಿಕೆಐಟಿಯಲ್ಲಿ ಉಚಿತ ಸೀಟ್ ನೀಡುವುದಾಗಿ ಸಚಿವ ಈಶ್ವರ ಖಂಡ್ರೆ ಘೋಷಣೆ
BIG NEWS : ಎಲ್ಲಾದರೂ ಹೋಗಿ ಸಾಯಿ ಅಂದ್ರೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದಂತಲ್ಲ : ಹೈಕೋರ್ಟ್
BIG NEWS: ಎಲ್ಲಾ ಪೌರ ಕಾರ್ಮಿಕರನ್ನು ಖಾಯಂ, ಗುತ್ತಿಗೆ ನೌಕರರಿಗೆ ಕನಿಷ್ಠ ವೇತನ: ಸಿಎಂ ಸಿದ್ದರಾಮಯ್ಯ ಘೋಷಣೆ