ಬೆಂಗಳೂರು: ಸಿಲಿಕಾನ್ ಸಿಟಿಯನ್ನು ಮತ್ತಷ್ಟು ಹಸಿರಾಗಿಸೋ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮವಹಿಸಿದೆ. ಇದರ ಅಂಗವಾಗಿ ಇಂದು ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆಯಡಿ ಹಸಿರೀಕರಣ ಕಾರ್ಯಕ್ರಮಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಚಾಲನೆ ನೀಡಿದರು.
ಇಂದು ವಿಶ್ವ ಪರಿಸರ ದಿನಾಚರಣೆ-2024ರ ಅಂಗವಾಗಿ ಕಬ್ಬನ್ ಪಾರ್ಕ್ ನ ಜವಹಾರ್ ಬಾಲ ಭವನದಲ್ಲಿ ಹಮ್ಮಿಕೊಂಡಿದ್ದ “ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆಯಡಿ ಹಸಿರೀಕರಣ ಕಾರ್ಯಕ್ರಮ” ಕ್ಕೆ ಉಪ ಮುಖ್ಯಮಂತ್ರಿ ಹಾಗೂ ನಗರಾಭಿವೃದ್ಧಿ ಸಚಿವರಾದ ಡಿ.ಕೆ ಶಿವಕುಮಾರ್ ರವರು ಚಾಲನೆ ನೀಡಿದರು.
ಈ ವೇಳೆ ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ರಿಜ್ವಾನ ಹರ್ಷದ್, ಆಡಳಿತಗಾರರಾದ ಉಮಾಶಂಕರ್, ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್, ಅರಣ್ಯ, ಪರಿಸರ ಮತ್ತು ಹವಾಮಾನ ವೈಪರೀತ್ಯ ನಿರ್ವಣೆಯ ವಿಶೇಷ ಆಯುಕ್ತರಾದ ಪ್ರೀತಿ ಗೆಹ್ಲೋಟ್, ವಲಯ ಆಯುಕ್ತರಾದ ಕರೀಗೌಡ, ವಿನೋತ್ ಪ್ರಿಯಾ, ಸ್ನೇಹಲ್, ದೀಪಕ್, ರಮ್ಯಾ, ಉಪ ಮುಖ್ಯಮಂತ್ರಿಗಳ ಕಾರ್ಯದರ್ಶಿಯಾದ ರಾಜೇಂದ್ರ ಚೋಳನ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ರೈತರೇ ನಿಮ್ಮ ಬೆಳೆಗೆ ‘ಸೈನಿಕ ಹುಳು’ ಬಾಧೆಯೇ? ಜಸ್ಟ್ ಈ ನಿಯಂತ್ರಣ ಕ್ರಮವಹಿಸಿ