ಬೆಂಗಳೂರು: ವಿಧಾನಸೌಧದ ಮುಂದೆಯೇ ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಅವಹೇಳನಕಾರಿಯಾಗಿ ಬ್ಯಾನರ್ ಅಳವಡಿಕೆ ಮಾಡಲಾಗಿತ್ತು. ಹೀಗೆ ಫ್ಲೇಕ್ಸ್ ಅಳವಡಿಸಿದವರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಬೆಂಗಳೂರಿನ ವಿಧಾನಸೌಧದ ಮುಂದೆ ಪ್ರಧಾನಿ ಕುರಿತು ಅವಹೇಳನಕಾರಿಯಾಗಿ ಬ್ಯಾನರ್ ಅಳವಡಿಕೆ ಮಾಡಲಾಗಿತ್ತು. ಬ್ಯಾನರ್ ಅಳವಡಿಸಿದ ಅಪರಿಚಿತರ ವಿರುದ್ಧ ಕ್ರಮಕ್ಕೆ ಬಿಜೆಪಿ ಮುಖಂಡರು ಒತ್ತಾಯಿಸಿದ್ದರು. ಅಲ್ಲದೇ ಕಾನೂನು ಕ್ರಮ ತೆಗೆದುಕೊಳ್ಳುವಂತೆಯೂ ದೂರು ನೀಡಲಾಗಿತ್ತು.
ಈ ಹಿನ್ನಲೆಯಲ್ಲಿ ಬೆಂಗಳೂರಿನ ವಿಧಾನಸೌಧದಲ್ಲಿ ಬಿಜೆಪಿ ಮುಖಂಡರ ದೂರು ಆಧರಿಸಿ ಎಫ್ಐಆರ್ ದಾಖಲಾಗಿದೆ. ಆ ಬಳಿಕ ತನಿಖೆ ಆರಂಭಿಸಲಿರುವಂತ ವಿಧಾನಸೌಧ ಠಾಣೆಯ ಪೊಲೀಸರು, ಬ್ಯಾನರ್ ಅಳವಡಿಸಿದವರ ವಿರುದ್ಧ ಸೂಕ್ತ ಕಾನೂನು ಕ್ರಮವನ್ನು ವಹಿಸಲಿದ್ದಾರೆ ಎನ್ನಲಾಗುತ್ತಿದೆ.








