ಬೆಂಗಳೂರು: ಬೇಡಿಕೆ ಈಡೇರಿಸೋ ಭರವಸೆ ನೀಡಿದರೂ ಬೆಂಗಳೂರು ಚಲೋ ನಿಲ್ಲಲ್ಲ ಎಂಬುದಾಗಿ ಕೆ ಎಸ್ ಆರ್ ಟಿ ಸಿ ಜಂಟಿ ಕ್ರಿಯಾ ಸಮಿತಿಯ ಸದಸ್ಯ ಮಂಜುನಾಥ್ ಆಡಿಯೋ ಸಂದೇಶದಲ್ಲಿ ಸ್ಪಷ್ಟ ಪಡಿಸಿದ್ದಾರೆ.
ಇಂದು ಈ ಸಂಬಂಧ ಆಡಿಯೋ ಸಂದೇಶ ಬಿಡುಗಡೆ ಮಾಡಿರುವಂತ ಅವರು, ಬೇಡಿಕೆ ಈಡೇರಿಕೆ ಬಗ್ಗೆ ಸ್ಪಷ್ಟ ಸಂದೇಶ ಬಂದರಷ್ಟೇ ಬೇರ ನಿರ್ಧಾರ ಕೈಗೊಳ್ಳಲಾಗುತ್ತದೆ. ಇಲ್ಲದೇ ಇದ್ದರೇ ಕರೆ ನೀಡಿರುವಂತ ನಾಳೆಯ ಬೆಂಗಳೂರು ಚಲೋ ನಡೆಯಲಿದೆ ಎಂಬುದಾಗಿ ತಿಳಿಸಿದ್ದಾರೆ.
ನಾಳೆ ಸಾರಿಗೆ ನಿಗಮಗಳ ನೌಕರರ ಬೇಡಿಕೆ ಈಡೇರಿಕೆಗಾಗಿ ಬೆಂಗಳೂರು ಚಲೋ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಸಾರಿಗೆ ಸಿಬ್ಬಂದಿಗಳು ಫ್ರೀಡಂ ಪಾರ್ಕ್ ಗೆ ಬರುವಂತೆ ಮಂಜುನಾಥ್ ಆಡಿಯೋ ಸಂದೇಶದಲ್ಲಿ ಮನವಿ ಮಾಡಿದ್ದಾರೆ.
ನಾಲ್ಕು ಸಾರಿಗೆ ನಿಗಮಗಳ ಸಿಬ್ಬಂದಿ ವೇತನ ಪರಿಷ್ಕರಣೆಗೆ ಸಿಎಂ ಸಿದ್ಧರಾಮಯ್ಯ ಗ್ರೀನ್ ಸಿಗ್ನಲ್
ಬೆಂಗಳೂರು: ನಾಳೆಯಿಂದ ಸಾರಿಗೆ ನೌಕರರು ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರು ಚಲೋ ಪ್ರತಿಭಟನೆಗೆ ಕರೆ ನೀಡಿದ್ದರು. ಈ ಹೊತ್ತಿನಲ್ಲೇ ನಾಲ್ಕು ಸಾರಿಗೆ ನಿಗಮಗಳ ಸಿಬ್ಬಂದಿ ವೇತನ ಪರಿಷ್ಕರಣೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಗ್ರೀನ್ ಸಿಗ್ನಲ್ ನೀಡಿದ್ದಾರೆ.
ಇಂದು ಈ ಸಂಬಂಧ ಸಾರಿಗೆ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದರು. ಸಾರಿಗೆ ಸಚಿವರು, ಆರ್ಥಿಕ ಇಲಾಖೆಯ ಅಧಿಕಾರಿಗಳು ಈ ಸಭೆಯಲ್ಲಿ ಭಾಗಿಯಾಗಿದ್ದರು. ವೇತರ ಪರಿಷ್ಕರಣೆ ಬಗ್ಗೆ ಚರ್ಚೆ ಮುಂದುವರೆದಿದ್ದು, ಇಂದು ರಾತ್ರಿಯೇ ಸಾರಿಗೆ ಸಿಬ್ಬಂದಿಗಳಿಗೆ ಸಿಹಿಸುದ್ದಿ ನೀಡೋ ಸಾಧ್ಯತೆ ಇದೆ.
BREAKING: ರಾಜ್ಯದಲ್ಲಿ ಮತ್ತೊಂದು ಮರ್ಯಾದಾ ಹತ್ಯೆಗೆ ಯತ್ನ: 4 ತಿಂಗಳ ಗರ್ಭಿಣಿ ಪ್ರಾಣಾಪಾಯದಿಂದ ಪಾರು








