ರಾಣೆಬೆನ್ನೂರು : ರಾಣೆಬೆನ್ನೂರು ತಾಲೂಕಿನ ದೇವರಗುಡ್ಡ ಗ್ರಾಮವನ್ನು ಪ್ರವಾಸಿ ಕೇಂದ್ರವಾಗಿ ಅಭಿವೃದ್ಧಿಪಡಿಸಲಾಗುವುದು. ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಲಾಗುವುದು. ದೇವರಗುಡ್ಡ ಅಭಿವೃದ್ಧಿ ಪ್ರಾಧಿಕಾರದ ವಿರುದ್ಧ ಇರುವ ತಡೆಯಾಜ್ಞೆ ತೆರವುಗೊಳಿಸಲು ಕಾನೂನು ಹೋರಾಟ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ರಾಣೆಬೆನ್ನೂರು ತಾಲ್ಲೂಕು ದೇವರಗುಡ್ಡದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಕಂಚಿನ ಪುತ್ಥಳಿ ಲೋಕಾರ್ಪಣೆಗೊಳಿಸಿ, ಬಳಿಕ ಕನಕಭವನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಾಲತೇಶ ದೇವರ ಸನ್ನಿಧಿ ದೇವರಗುಡ್ಡವನ್ನು ಪ್ರವಾಸಿ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲಾಗುವುದು ಮತ್ತು ದೇವರಗುಡ್ಡ ಅಭಿವೃದ್ಧಿ ಪ್ರಾಧಿಕಾರದ ವಿರುದ್ಧ ಇರುವ ತಡೆಯಾಜ್ಞೆಯನ್ನು ತೆರವುಗೊಳಿಸಲು ಕಾನೂನು ಹೋರಾಟ ನಡೆಸಲಾಗುವುದು. ದೇವರಗುಡ್ಡಕ್ಕೆ ಎಲ್ಲಾ ಮೂಲಭೂತ ಸೌಕರ್ಯಗಳನ್ನೂ ಒದಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.