ಬೆಂಗಳೂರು: ದೇವರಾಜ ಅರಸು ಟ್ರಕ್ ಟರ್ಮಿನಲ್ನಲ್ಲಿ (ಡಿಡಿಯುಟಿಎಲ್) ಸುಮಾರು 47.10 ಕೋಟಿ ಅವ್ಯವಹಾರ ಆರೋಪ ಪ್ರಕರಣದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಡಿ.ಎಸ್. ವೀರಯ್ಯ ಅವರನ್ನು ಸಿಐಡಿ ಪೊಲೀಸರು ಬಂಧಿಸಿದ್ದರು. ಆ ಬಳಿಕ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಅವರಿಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿತ್ತು. ಇಂತಹ ಪ್ರಕರಣದಲ್ಲಿ ಇಂದು ಕೋರ್ಟ್ ಷರತ್ತು ಬದ್ದ ಜಾಮೀನು ಮಂಜೂರು ಮಾಡಿದೆ.
ಜುಲೈ.12ರಂದು ದೇವರಾಜ ಅರಸು ಟ್ರಕ್ ಟರ್ಮಿನಲ್ ಹಗರಣ ಸಂಬಂಧ ಮಾಜಿ ವಿಧಾನಪರಿಷತ್ ಸದಸ್ಯ ಡಿ.ಎಸ್ ವೀರಯ್ಯ ಅವರನ್ನು ಸಿಐಡಿ ಪೊಲೀಸರು ಬಂಧಿಸಿದ್ದರು. ಆ ಬಳಿಕ ಅವರನ್ನು ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿತ್ತು. ಹೀಗಾಗಿ ಮಾಜಿ ಎಂಎಲ್ಸಿ ಡಿಎಸ್ ವೀರಯ್ಯ ಜೈಲುಪಾಲಾಗಿದ್ದರು.
ಇಂದು ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ನಲ್ಲಿ ಪ್ರಕರಣ ಸಂಬಂದ ಡಿ.ಎಸ್ ವೀರಯ್ಯ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆ ನಡೆಸಿತು. ಅಂತಿಮವಾಗಿ ಕೋರ್ಟ್ ದೇವರಾಜ ಅರಸು ಟ್ರಕ್ ಟರ್ಮಿನಲ್ ಹಗರಣದಲ್ಲಿ ಜೈಲುಪಾಲಾಗಿರುವಂತ ಡಿಎಸ್ ವೀರಯ್ಯ ಅವರಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಮಾಜಿ ಪರಿಷತ್ ಸದಸ್ಯ ಡಿಎಸ್ ವೀರಯ್ಯಗೆ ಬಿಗ್ ರಿಲೀಫ್ ನೀಡಿದೆ.
BREAKING: ಮುಡಾ ಹಗರಣದ ಚರ್ಚೆಗೆ ಅವಕಾಶ ನೀಡದ ಹಿನ್ನಲೆ: 2 ಸದನಗಳಲ್ಲೂ ಅರೋಹಾತ್ರಿ ಧರಣಿಗೆ ಬಿಜೆಪಿ ನಿರ್ಧಾರ