ಬೆಂಗಳೂರು: ಡಿ ದೇವರಾಜ ಅರಸು ಟ್ರಕ್ ಟರ್ಮಿನಲ್ ಅಕ್ರಮ ಪ್ರಕರಣ ಸಂಬಂಧ ಬಂಧನಕ್ಕೆ ಒಳಗಾಗಿದ್ದಂತ ಮಾಜಿ ಎಂ.ಡಿ ಶಂಕರಪ್ಪಗೆ ಕೋರ್ಟ್ 2 ದಿನಗಳ ಕಾಲ ಸಿಐಡಿ ಕಸ್ಟಡಿಗೆ ನೀಡಿ ಆದೇಶಿಸಿದೆ.
ಮಾಜಿ ಎಂ ಡಿ ಶಂಕರಪ್ಪ ಅವರ ವಿರುದ್ಧದ 47.10 ಕೋಟಿ ಡಿ.ದೇವರಾಜ ಅಸರು ಟ್ರಕ್ ಟರ್ಮಿನಲ್ ಅಕ್ರಮ ಪ್ರಕರಣದ ತನಿಖೆಯನ್ನು ಸಿಐಡಿ ಅಧಿಕಾರಿಗಳು ಚುರುಕುಗೊಳಿಸಿದ್ದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ವಾಣಿಜ್ಯ ಪ್ರಚಾರ ಶಾಖೆಯ ಉಪನಿರ್ದೇಶಕರಾಗಿದ್ದ ಎಸ್. ಶಂಕರಪ್ಪ ಅವರು, ಡಿಡಿಯೂಟಿಟಿಎಲ್ ನಲ್ಲಿ ಎಂ ಡಿ ಅಗಿ ಕೆಲಸ ಮಾಡ್ತಿದ್ದರು.
ಇವರ ಅಧಿಕಾರ ಅವಧಿಯಲ್ಲಿ ಅಕ್ರಮ ನಡೆದಿರುವ ಪುರಾವೆಗಳು ಲಭ್ಯವಾಗಿತ್ತು. ಡಿಡಿಯೂಟಿಟಿಎಲ್ 2021 ರಿಂದ 2023ರ ಅವಧಿಯಲ್ಲಿ ಅಕ್ರಮ ಎನ್ನಲಾದ ಅಕ್ರಮ ಬಗ್ಗೆ ಹಾಲಿ ಎಂಡಿ ಸಿ ಎನ್ ಶಿವಪ್ರಕಾಶ್ ವಿಲ್ಸನ್ ಗಾರ್ಡನ್ ಠಾಣೆಗೆ ದೂರು ನೀಡಿದರು. 2023 ಸೆಪ್ಟೆಂಬರ್ 23ರಂದು ಎಫ್ ಐ ಆರ್ ದಾಖಲಾಗಿತ್ತು.
ಈ ಪ್ರಕರಣದ ತನಿಖೆಯನ್ನ ರಾಜ್ಯ ಸರ್ಕಾರ ಸಿಐಡಿಗೆ ವಹಿಸಲಾಗಿತ್ತು. ಡಿಡಿಯೂಟಿಟಿಎಲ್ 2021 ಅಕ್ಟೋಬರ್ 25ರಂದು 194ನೇ ನಿರ್ದೇಶಕ ಮಂಡಳಿ ಸಭೆ ನಡೆಸಲಾಗಿತ್ತು. ಟರ್ಕ್ ಟರ್ಮಿನಲ್ ಗಳ ದುರಸ್ತಿ ಹಾಗೂ ನಿರ್ವಹಣೆ ಕಾಮಗಾರಿಯನ್ನು ತುರ್ತಾಗಿ ತುಂಡ ಗುತ್ತಿಗೆ ನೀಡುವ ಬಗ್ಗೆ
ಚರ್ಚೆ ನಡೆಸಲಾಗಿತ್ತು.
10 ಕೋಟಿವರೆಗೆ ತುಂಡು ಗುತ್ತಿಗೆ ನೀಡಲು ಅಕ್ರಮವಾಗಿ ಅನುಮೋದನೆ ನಿರ್ಣಯ ಮಾಡಲಾಗಿತ್ತು. ಕಾಮಗಾರಿ ನಡೆಯದಿದ್ದರೂ ನಕಲಿ ದಾಖಲೆಗಳನ್ನು ಸೃಷ್ಟಿಸಿ ಹಣ ಪಡೆಯಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಪ್ರಕರಣಕ್ಕೆ ಸಂಬಂಧಪಟ್ಟಂತೆ ಡಿಡಿಯೂಟಿಟಿಎಲ್ ಕಚೇರಿ ಹಾಗೂ ಹಲವಾರು ಮನೆಗಳ ಮೇಲೆ ದಾಳಿ ನಡೆಸಲಾಗಿತ್ತು. 600ಕ್ಕೂ ಹೆಚ್ಚು ದಾಖಲೆಗಳು ಜಪ್ತಿ ಮಾಡಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು. ಈ ಬಳಿಕ ಮಾಜಿ ಎಂ.ಡಿ ಶಂಕರಪ್ಪ ಅವರನ್ನು ಬಂಧಿಸಲಾಗಿತ್ತು.
ಇಂದು ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಅವರನ್ನು ಹೆಚ್ಚಿನ ವಿಚಾರಣೆಗಾಗಿ ತಮ್ಮ ವಶಕ್ಕೆ ನೀಡುವಂತೆ ಸಿಐಡಿ ಮನವಿ ಮಾಡಿತ್ತು. ಈ ಮನವಿ ಪುರಸ್ಕರಿಸಿದಂತ ನ್ಯಾಯಾಲಯವು ಮೂರು ದಿನಗಳ ಕಾಲ ಸಿಐಡಿ ವಶಕ್ಕೆ ನೀಡಿ ಆದೇಶಿಸಿದೆ.
ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ: ಕೇಜ್ರಿವಾಲ್ ಆಪ್ತ ‘ಬಿಭವ್ ಕುಮಾರ್’ಗೆ 3 ದಿನ ಪೊಲೀಸ್ ಕಸ್ಟಡಿಗೆ
BREAKING: ‘ಪ್ರಜ್ವಲ್ ರೇವಣ್ಣ’ ಅಶ್ಲೀಲ ವೀಡಿಯೋ ಕೇಸ್: ಏಕಕಾಲಕ್ಕೆ ಹಾಸನ ಜಿಲ್ಲೆಯ 3 ಕಡೆ ‘SIT ದಾಳಿ’