ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪೆನ್ ಡ್ರೈವ್ ಹಂಚಿಕೆ ಹಾಗೂ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಎಸ್ಐಟಿ ವಶದಲ್ಲಿರುವ ಬಿಜೆಪಿ ಮುಖಂಡ ದೇವರಾಜೇಗೌಡ ನಿನ್ನೆ  ಡಿಕೆ ಶಿವಕುಮಾರ್ ವಿರುದ್ಧ 100 ಕೋಟಿ ರೂಪಾಯಿ ಆಫರ್ ಆರೋಪ ಮಾಡಿದ್ದರು. ಇದಕ್ಕೆ  ಡಿಸಿಎಂ ಡಿಕೆ ಶಿವಕುಮಾರ್ ದೇವರಾಜೇಗೌಡ ಒಬ್ಬ ತಲೆ ಕೆಟ್ಟವನು ಆತನನ್ನು ಆಸ್ಪತ್ರೆಗೆ ಸೇರಿಸಬೇಕಾಗಿದೆ ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವರಾಜ್ ಗೌಡ ಏನು ಬೇಕಾದರೂ ಮಾತನಾಡಿಕೊಳ್ಳಲಿ. ದೇವರಾಜೇಗೌಡ ತಲೆ ಕೆಟ್ಟವನು ಆತನನ್ನು ಆಸ್ಪತ್ರೆಗೆ ಸೇರಿಸಬೇಕು. ನಾನು ದೇವರಾಜೇಗೌಡ ಜೊತೆಗೆ ಯಾವುದೇ ಮಾತುಕತೆ ನಡೆಸಿಲ್ಲ. ನಾನು ಯಾವುದೇ ತಪ್ಪು ಮಾಡಿಲ್ಲ. ಹಾಗಾಗಿ ಯಾವುದೇ ವಿಷಯಕ್ಕೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು.

ನಿನ್ನೆ ಪೊಲೀಸ್ ವಾಹನದಲ್ಲಿ ಕುಳಿತುಕೊಂಡು ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಮುಖಂಡ ವಕೀಲ ದೇವರಾಜೇಗೌಡ, ನರೇಂದ್ರ ಮೋದಿ ಬಿಜೆಪಿ ಹಾಗೂ ಎಚ್ ಡಿ ಕುಮಾರಸ್ವಾಮಿ ಹೆಸರು ಕೆಡಿಸಲು ಡಿಕೆ ಶಿವಕುಮಾರ್ ನನಗೆ 100 ಕೋಟಿ ರೂಪಾಯಿ ಆಫರ್ ನೀಡಿದ್ದರು.ಎಚ್ ಡಿ ಕುಮಾರಸ್ವಾಮಿನೆ ಪೆನ್ ಡ್ರೈವ್ ಹಂಚಿದ್ದಾರೆ ಎಂದು ಹೇಳಲು ನನಗೆ ಹೇಳಿದ್ದರು.

ಅದಕ್ಕೆ ನಾನು ಒಪ್ಪದಿದ್ದಾಗ ಇದೀಗ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಕೆ ಎಸ್ ಹಾಗೂ ಪಂಡರಿ ಹಂಚಿಕೆ ಆರೋಪ ಮಾಡುತ್ತಿದ್ದಾರೆ.ಆದರೆ ನಾನು ಜಯನಿಂದ ಬಂದ ದಿನವೇ ಸರ್ಕಾರ ಪತನವಾಗಲಿದೆ ಡಿಕೆ ಶಿವಕುಮಾರ್ ಅವರನ್ನು ರೈಲಿಗೆ ಕಳುಹಿಸುತ್ತೇನೆ ಎಂದು ಗುಡುಗಿದ್ದರು.

Share.
Exit mobile version