ಬೆಂಗಳೂರು:  ಕೆ.ಸಿ ಜನರಲ್ ಆಸ್ಪತ್ರೆಗೆ ಇಂದು ಭೇಟಿ ನೀಡಿದ ಅರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಸ್ಪತ್ರೆ ಆವರಣದಲ್ಲಿ ನಿರ್ಮಾಣವಾಗುತ್ತಿರುವ ಟ್ರಾಮಾ ಕೇರ್ ಸೆಂಟರ್ ನ ಕಾಮಗಾರಿ ಪರಿಶೀಲಿಸಿದರು. 35 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ 50 ಬೆಡ್ ಸಾಮರ್ಥ್ಯದ ಟ್ರಾಮಾ ಸೆಂಟರ್ ಕಾಮಗಾರಿಯನ್ನ ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಸಚಿವರು ಸೂಚನೆ ನೀಡಿದರು. ಅಲ್ಲದೇ ಆಸ್ಪತ್ರೆಗೆ ತುರ್ತು ಚಿಕಿತ್ಸಾ ಘಟಕವನ್ನ ನೂತನವಾಗಿ ಟ್ರಾಮಾ ಸೆಂಟರ್ ಗೆ ಶಿಫ್ಟ್ ಮಾಡುವ ಬಗ್ಗೆ ಚರ್ಚೆ ನಡೆಸಿದರು.

ಕೆ.ಸಿ ಜನರಲ್ ಆಸ್ಪತ್ರೆಗೆ ಕಾಯಕಲ್ಪ ಒದಗಿಸುವ 150 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಕೆ.ಸಿ ಜನರಲ್ ಜನಪ್ರೀಯ ಆಸ್ಪತ್ರೆಯನ್ನಾಗಿ ರೂಪಿಸಲು ಎಲ್ಲರು ಶ್ರಮ ವಹಿಸಬೇಕು ಎಂದರು. ಕೆ.ಸಿಜನರಲ್ ಆಸ್ಪತ್ರೆಯ ಆವರಣದಲ್ಲಿ ಹೊಸದಾಗಿ 66.78 ಕೋಟಿ ವೆಚ್ಚದಲ್ಲಿ 200 ಬೆಡ್ ಸಾಮರ್ಥ್ಯದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡ ಕಾಮಗಾರಿ ಪ್ರಾರಂಭಿಸುವ ನಿಟ್ಟಿನಲ್ಲಿ ಗುದ್ದಲಿ ಪೂಜೆಗೆ ಅಣಿ ಮಾಡಿಕೊಳ್ಳಲು ಸಚಿವರು ಸೂಚನೆ ನೀಡಿದರು.

ಆಸ್ಪತ್ರೆಗೆ ಬರುವ ರೋಗಿಗಳು ಔಷಧಿಗಾಗಿ ಬೇರೆಕಡೆ ಹೋಗುವ ಸ್ಥಿತಿ ಬರಬಾರದು ಎಂದು ಖಡಕ್ ವಾರ್ನಿಂಗ್ ನೀಡಿದ ಸಚಿವರು, ಆಸ್ಪತ್ರೆಯ ಮಳಿಗೆಗಳಲ್ಲಿ ಇರುವ ಔಷಧಿ ಕೇಂದ್ರಗಳಿಗೆ ಗೇಟ್ ಪಾಸ್ ನೀಡಿ. ಸರ್ಕಾರಿ ಔಷಧಿಯ ಅಂಗಡಿಯನ್ನೇ ಮಧ್ಯರಾತ್ರಿಯ ವರೆಗೂ ತೆರೆಯಲು ಅಗತ್ಯ ಸಿಬ್ಬಂದಿಗಳನ್ನ ನೇಮಿಸಿಕೊಳ್ಳಲು ಸೂಚನೆ ನೀಡಿದರು. ಅಲ್ಲದೇ ಆಸ್ಪತ್ರೆಯಲ್ಲಿ ಜಯದೇವ ಹೃದ್ರೋಗ ಘಟಕ ಕೂಡ ರಾತ್ರಿ 10 ಗಂಟೆಯ ವರೆಗೆ ಕಾರ್ಯನಿರ್ವಹಿಸುವಂತೆ ಕ್ರಮ ಕೈಗೊಳ್ಳುವ ಬಗ್ಗೆ ಅಧಿಕಾರಿಗಳಿಗೆ ಸಲಹೆ ನೀಡಿದರು.

ಹೀಗಿದೆ ಆಸ್ಪತ್ರೆಯ ಆವರಣದಲ್ಲಿ ಕೈಗೊಳ್ಳುವ ಪ್ರಮುಖ ಅಭಿವೃದ್ಧಿ ಕಾಮಗಾರಿಗಳ ಹೈಲೆಟ್ಸ್

66.78 ಕೋಟಿ ವೆಚ್ಚದಲ್ಲಿ 200 ಹಾಸಿಗೆಯ ತಾಯಿ ಮತ್ತು ಮಕ್ಕಳ ಆಸ್ಪತ್ರೆ ನಿರ್ಮಾಣ

35 ಕೋಟಿ ವೆಚ್ಚದಲ್ಲಿ ಟ್ರಾಮಾಕೇರ್ ಸೆಂಟರ್ ಕಾಮಗಾರಿ ಮಾರ್ಚ್ ಒಳಗೆ ಪೂರ್ಣ

38.28 ಕೋಟಿ ವೆಚ್ಚದಲ್ಲಿ ಭೋದಕ ವಿಭಾಗ ಕಟ್ಟಡ ನಿರ್ಮಾಣ

4.28 ಕೋಟಿ ವೆಚ್ಚದಲ್ಲಿ ಶವಾಗಾರ ಕೊಠಡಿ

4.80 ಕೋಟಿ ವೆಚ್ಚದ ಅಗ್ನಿ ಶಾಮಕ ವ್ಯವಸ್ಥೆ

2 ಕೋಟಿ ವೆಚ್ಚದಲ್ಲಿ ಲ್ಯಾಂಡ್ರಿ, 38 ಲಕ್ಷದಲ್ಲಿ ಜೈವಿಕ ವೈದ್ಯಕೀಯ ತ್ಯಾಜ್ಯ ಘಟಕ

9.98 ಕೋಟಿ ವೆಚ್ಚದಲ್ಲಿ ಕೆ.ಸಿ ಜನರಲ್ ಆಸ್ಪತ್ರೆಯ ಹಳೆ ಕಟ್ಟಡಗಳ ದುರಸ್ಥಿ ಕಾಮಗಾರಿ ಅನುಮೋದನೆಗೆ ಪ್ರಸ್ರಾವನೆ

ಮುರಿದು ಬಿದ್ದಿರುವ ಆರ್‌ಸಿಸಿ ಚಜ್ಜಾಗಳನ್ನು ಮರು ನಿರ್ಮಾಣ, ಶೌಚಾಲಯಗಳಲ್ಲಿನ ನೀರು ಸರಬರಾಜು ಮತ್ತು ನೈರ್ಮಲೀಕರಣ ವ್ಯವಸ್ಥೆಯನ್ನು ದುರಸ್ಥಿ ಪಡಿಸುವುದು ಸೇರಿದಂತೆ ವಿವಿಧ ದುರಸ್ಥಿ ಕಾಮಗಾರಿಗಳಿಗೆ ಪ್ರಸ್ತಾವನೆ ಸಲ್ಲಿಸಲು ನಿರ್ಧಾರ ಕೈಗೊಳ್ಳಲಾಗಿದೆ.

BREAKING: ಅತ್ಯಾಚಾರ ಕೇಸ್: ಜುಲೈ.8ರವರೆಗೆ ಪ್ರಜ್ವಲ್ ರೇವಣ್ಣ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ

BREAKING : ಶಾಸಕ ವಿನಯ್‌ ಕುಲಕರ್ಣಿಗೆ ಕೋರ್ಟ್ ಶಾಕ್‌ : ಧಾರವಾಡ ಭೇಟಿಗೆ‌ ಮತ್ತೆ ನಿರಾಕರಣೆ

Share.
Exit mobile version