ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಜೈಲುಪಾಲಾಗಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಪೀಠ ತ್ಯಾಗ ಮಾಡಬೇಕು ಎಂಬ ಒತ್ತಾಯ ಮಠದ ಭಕ್ತರಿಂದಲೇ ಕೇಳಿ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಚಿತ್ರದುರ್ಗದಲ್ಲಿ ಮಠದ ಅನುಯಾಯಿಗಳ ಸಭೆ ನಡೆಯಿತು.
BIG NEWS: ಆರ್ ಎಸ್ ಎಸ್ ನವರು ಪಾಪದ ಕೂಸು; ಬಿಎಸ್ ವೈ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು
ಇತ್ತ, ಹೈಕೋರ್ಟ್ನಲ್ಲಿ ಚೆಕ್ಗೆ ಸಹಿ ಹಾಕುವ ಅಧಿಕಾರ ಕೋರಿ ಸ್ವಾಮೀಜಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಕೂಡ ನಡೆಯಿತು. ಆದರೆ ಹೈಕೋರ್ಟ್ ಕೆಲವು ಪ್ರಶ್ನೆಗಳನ್ನು ಕೇಳಿ ಸಹಿ ಹಾಕಲು ಅನುಮತಿಯನ್ನು ತಾತ್ಕಾಲಿಕವಾಗಿ ನಿರಾಕರಿಸಿತು. ಇನ್ನೊಂದು ಬೆಳವಣಿಗೆಯಲ್ಲಿ ಚಿತ್ರದುರ್ಗದ ಕಾರಾಗೃಹದಲ್ಲಿ ಮುರುಘಾ ಮಠದ ಪ್ರಭಾರ ಪೀಠಾಧ್ಯಕ್ಷ ರುದ್ರೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ವಿವಿಧ ಸ್ವಾಮೀಜಿಗಳು ಶಿವಮೂರ್ತಿ ಶರಣರನ್ನು ಭೇಟಿಯಾದರು. ದಾವಣಗೆರೆ ವಿರಕ್ತ ಮಠದ ಬಸವಪ್ರಭು ಸ್ವಾಮೀಜಿ ಸಹ ಈ ಗುಂಪಿನಲ್ಲಿದ್ದರು. ಈ ಭೇಟಿ ಮತ್ತು ಚರ್ಚೆಯ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.
BIG NEWS: ಆರ್ ಎಸ್ ಎಸ್ ನವರು ಪಾಪದ ಕೂಸು; ಬಿಎಸ್ ವೈ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು
ಪೀಠತ್ಯಾಗಕ್ಕೆ ಶಿವಮೂರ್ತಿ ಶರಣರು ನಿರಾಕರಿಸುತ್ತಿರುವ ಹಿನ್ನೆಲೆಯಲ್ಲಿ ಚಿತ್ರದುರ್ಗದ ಎಸ್.ನಿಜಲಿಂಗಪ್ಪ ಸ್ಮಾರಕ ಆವರಣದಲ್ಲಿ ಮಾಜಿ ಸಚಿವ ಎಚ್.ಏಕಾಂತಯ್ಯ ನೇತೃತ್ವದಲ್ಲಿ ಸಭೆ ನಡೆಯಿತು.