ದಕ್ಷಿಣ ಕನ್ನಡ: ನೀವು ಧರ್ಮಸ್ಥಳದ ಮಂಜುನಾಥಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡೋ ಪ್ಲಾನ್ ಮಾಡಿದ್ದರೇ ಇಲ್ಲಿ ಕೇಳಿ. ಶ್ರೀ ಕ್ಷೇತ್ರ ಧರ್ಮಸ್ಥಳ ದೇವಳದ ಮಂಜುನಾಥಸ್ವಾಮಿಯ ದೇವರ ದರ್ಶನದ ಸಮಯ ಬದಲಾವಣೆ ಮಾಡಲಾಗಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಮಾಹಿತಿ ನೀಡಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳ ದೇವಳದಲ್ಲಿ ವಿಷು ಜಾತ್ರೆ ಪ್ರಯುಕ್ತ ವಿಶೇಷ ಪೂಜಾ ಕೈಂಕರ್ಯಗಳು ನಡೆಯುವುದರಿಂದ ದೇವರ ದರ್ಶನ ಸಮಯದಲ್ಲಿ ವ್ಯತ್ಯಯವಾಗಲಿದೆ ಎಂದಿದೆ.
ದಿನಾಂಕ 18-04-2025ರಿಂದ 23-04-2025ರವರೆಗೆ ಬೆಳಗ್ಗೆ 6.30ರಿಂದ 8.30ರವರೆಗೆ ಹೊರಾಂಗಣದಿಂದ ಮಾತ್ರ ದೇವರ ದರ್ಶನಕ್ಕೆ ಅವಕಾಶವಿದೆ ಎಂಬುದಾಗಿ ಹೇಳಿದೆ.
ಇನ್ನೂ ಬೆಳಗ್ಗೆ 8.30ರ ಬಳಿಕ ಎಂದಿನಂತೆ ದೇವರ ದರ್ಶನ ನಡೆಯಲಿದೆ. ಸಂಜೆ 5 ಗಂಟೆಯಿಂದ ರಾತ್ರಿ 8.30ರವರೆಗೆ ಮಾತ್ರ ದೇವರ ದರ್ಶನಕ್ಕೆ ಅವಕಾಶವಿದೆ ಎಂದು ತಿಳಿಸಿದೆ.
ದಿನಾಂಕ 22-04-2025ರಂದು ಬೆಳಗ್ಗೆ 9 ಗಂಟೆಯ ಬಳಿಕ ದೇವರ ದರ್ಶನ ಪ್ರಾರಂಭವಾಗಲಿದೆ ಎಂಬುದಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.
ಪ್ರಯಾಣಿಕರ ಗಮನಕ್ಕೆ: ಬೇಸಿಗೆ ರಜೆ ಪ್ರಯುಕ್ತ ಬೆಳಗಾವಿ-ಬೆಂಗಳೂರು ನಡುವೆ ವಿಶೇಷ ರೈಲು
GOOD NEWS : ರಾಜ್ಯದ ಮಹಿಳೆಯರಿಗೆ ಸಿಹಿಸುದ್ದಿ : ಇನ್ಮುಂದೆ ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ಆಧಾರ್ ಕಾರ್ಡ್ ಬೇಕಿಲ್ಲ!