ಕೊಪ್ಪಳ : ತಾಲೂಕಿನ ಚಿಕ್ಕರಾಂಪೂರದ ಬಳಿ ಇರುವ ಧಾರ್ಮಿಕ ಸ್ಥಳ ಅಂಜನಾದ್ರಿ ಬೆಟ್ಟದ ಸಮೀಪ ಇತ್ತೀಚೆಗೆ ಚಿರತೆಗಳು ಕಂಡು ಬಂದಿರುವ ಹಿನ್ನೆಲೆ ಬೆಟ್ಟಕ್ಕೆ ಬರುವ ಭಕ್ತರ ಸುರಕ್ಷತೆಯ ದೃಷ್ಟಿಯಿಂದ ನಿರ್ಬಂಧ ವಿಧಿಸಲಾಗಿದೆ.
Good News : ವಸತಿ ರಹಿತರಿಗೆ ಭರ್ಜರಿ ಗುಡ್ ನ್ಯೂಸ್ : ಸೆ. 7 ಕ್ಕೆ ಎರಡು ಸಾವಿರ ಮನೆಗಳ ಹಸ್ತಾಂತರ
480ಕ್ಕೂ ಹೆಚ್ಚು ಅಡಿಗಳ ಎತ್ತರದ ಬೆಟ್ಟದ ಮೇಲಿರುವ ಆಂಜನೇಯನ ದರ್ಶನ ಪಡೆಯಲು ಭಕ್ತರಿಗೆ ಬೆಳಗ್ಗೆ 8ರಿಂದ ಮಧ್ಯಾಹ್ನ 3ರವರೆಗೆ ಮಾತ್ರ ಅವಕಾಶ ನೀಡಲಾಗಿದೆ. ಅಲ್ಲದೇ ಬೆಟ್ಟದ ಮೇಲೆ ಮತ್ತು ಅಲ್ಲಲ್ಲಿ ಫೊಟೋ ಕ್ಲಿಕ್ಕಿಸಿಕೊಳ್ಳುವುದನ್ನು ನಿರ್ಬಂಧಿಸಲಾಗಿದೆ ಎಂದು ದೇಗುಲದ ಆಡಳಿತಾಧಿಕಾರಿ ಆದೇಶ ನೀಡಿದೆ.
Good News : ವಸತಿ ರಹಿತರಿಗೆ ಭರ್ಜರಿ ಗುಡ್ ನ್ಯೂಸ್ : ಸೆ. 7 ಕ್ಕೆ ಎರಡು ಸಾವಿರ ಮನೆಗಳ ಹಸ್ತಾಂತರ
ಇತ್ತೀಚಿನ ದಿನಗಳಲ್ಲಿ ಚಿರತೆಗಳ ಚಲನವಲನ ದೇಗುಲದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳ ಸೂಚನೆ ಮೇರೆಗೆ ದೇಗುಲದ ಆಡಳಿತ ಮಂಡಳಿ ಭಕ್ತರ ಹಿತ ಸೃಷ್ಠಿಯಿಂದ ಎಚ್ಚರಿಕೆ ಕ್ರಮಗಳನ್ನು ಅನುಸರಿದೆ.