ಬೆಂಗಳೂರು: ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ವೀಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ನೇತೃತ್ವದಲ್ಲಿ ತನಿಖೆಗೆ ಸರ್ಕಾರ ಆದೇಶಿಸಿದೆ.
ಸರ್ಕಾರಿ ಕಚೇರಿಯಲ್ಲೇ ಡಿಜಿಪಿ ರಾಮಚಂದ್ರರಾವ್ ಮಹಿಳೆಯರೊಂದಿಗೆ ರಾಸಲೀಲೆಯಾಡಿದಂತ ವೀಡಿಯೋಗಳು ವೈರಲ್ ಆಗಿದ್ದವು. ಈ ಬೆನ್ನಲ್ಲೇ ಅವರನ್ನು ಅಮಾನತುಗೊಳಿಸಿ ಸರ್ಕಾರ ಆದೇಶಿಸಿತ್ತು. ಇದಾದ ಬಳಿಕ ಈ ಪ್ರಕರಣದ ತನಿಖೆಗೆ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ನೇತೃತ್ವದಲ್ಲಿ ಆದೇಶಿಸಲಾಗಿದೆ.
ಘಟನೆ ಸತ್ಯಾಸತ್ಯತೆಗಾಗಿ ಡಿಜಿ ಮತ್ತು ಐಜಿಪಿಗೆ ಸರ್ಕಾರ ಸೂಚಿಸಿದ್ದರು. ಈ ಹಿನ್ನಲೆಯಲ್ಲಿ ಹಿತೇಂದ್ರ ನೇತೃತ್ವದಲ್ಲಿ ತನಿಖೆಗೆ ಡಿಜಿ ಮತ್ತು ಐಜಿಪಿ ಸೂಚನೆ ನೀಡಿದ್ದಾರೆ.








