ಬೆಳಗಾವಿ: ಡಿಜಿಪಿ ಡಾ.ರಾಮಚಂದ್ರ ರಾವ್ ಅವರ ರಾಸಲೀಲೆ ವೀಡಿಯೋ ಸುದ್ದಿ ಬಗ್ಗೆ ವಿಷಯ ತಿಳಿದು ಬಂದಿದೆ. ಕಾನೂನಿನ ಮುಂದೆ ಯಾರು ದೊಡ್ಡವರಲ್ಲ. ವಿಚಾರಣೆ ಮಾಡಿ ಅವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.
ಇಂದು ಬೆಳಗಾವಿಯ ನಂದಗಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ವಿಚಾರಣೆ ಮಾಡಿಸುತ್ತೇವೆ. ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುತ್ತೇವೆ. ಎಷ್ಟೇ ಎತ್ತರದ ವ್ಯಕ್ತಿಯಾದರೂ ಕ್ರಮ ಕೈಗೊಳ್ಳುತ್ತೇವೆ ಎಂದರು.
ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ. ಕ್ರಮ ಕೈಗೊಳ್ಳುತ್ತೇವೆ. ನನಗೆ ಮುಂಜಾನೆ ಈ ವಿಚಾರ ಗೊತ್ತಾಗಿದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಅವರು ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ವೀಡಿಯೋ ಬಗ್ಗೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
Fact Check: ಕೇಂದ್ರ ಸರ್ಕಾರದಿಂದ ರೂ.500 ನೋಟುಗಳನ್ನು ನಿಷೇಧ?! ಇಲ್ಲಿದೆ ವೈರಲ್ ಸುದ್ದಿಯ ಅಸಲಿ ಸತ್ಯ







